HomeKarnatakaಪ್ರೀತಿಸಿದ ಯುವತಿ ಮದುವೆಯಾಗಲು ಒಪ್ಪದ ಪೋಷಕರು: ಮನನೊಂದ ಯುವಕ ಆತ್ಮಹತ್ಯೆ

ಪ್ರೀತಿಸಿದ ಯುವತಿ ಮದುವೆಯಾಗಲು ಒಪ್ಪದ ಪೋಷಕರು: ಮನನೊಂದ ಯುವಕ ಆತ್ಮಹತ್ಯೆ

ಬೆಂಗಳೂರು: ಅಂತರ್ಜಾತಿ ಪ್ರೇಮ ವಿವಾಹಕ್ಕೆ ಪೋಷಕರು ನಿರಾಕರಿಸಿದ ಕಾರಣ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಮೃತ ಯುವಕನನ್ನು ರಾಮ್ ಕುಮಾರ್ (25) ಎಂದು ಗುರುತಿಸಲಾಗಿದೆ. ಜಕ್ಕೂರಿನ ಶ್ರೀರಾಂಪುರದ ನಿವಾಅಸಿಯಾಗಿರುವ ರಾಮ್ ಕುಮಾರ್, ಅನ್ಯಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ, ಜಾತಿ ಬೇರೆ ಎಂಬ ಕಾರಣಕ್ಕೆ ಪೋಷಕರು ಇವರ ವಿವಾಹಕ್ಕೆ ಒಪ್ಪಿರಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರೀತಿಸಿದ ಯುವತಿಯನ್ನು ವಿವಾಹವಾಗಲು ಪೋಷಕರು ಒಪ್ಪಿಲ್ಲ ಎಂದು ಮನನೊಂದ ರಾಅಮ್ ಕುಮಾಅರ್, ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಕೆಲಸಕ್ಕೆ ಹೋಗಿದ್ದ ತಂದೆ-ತಾಯಿ ಮನೆಗೆ ವಾಪಸ್ ಆದಾಗಲೇ ಮಗ ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಬೆಳಕಿಗೆ ಬಂದಿದೆ.

ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669


For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular