HomeKarnatakaಮುಂದುವರೆದ ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ: ಬಳ್ಳಾರಿಯಲ್ಲಿ 11 ಎಕರೆ ಜಮೀನು ವಶ

ಮುಂದುವರೆದ ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ: ಬಳ್ಳಾರಿಯಲ್ಲಿ 11 ಎಕರೆ ಜಮೀನು ವಶ

ಬಳ್ಳಾರಿ: ಜಿಲ್ಲೆಯ ಬಳ್ಳಾರಿ (ಗ್ರಾಮೀಣ) ವ್ಯಾಪ್ತಿಯಲ್ಲಿ ಬರುವ ಬೆಲೆಬಾಳುವ ಸರ್ಕಾರಿ ಜಮೀನುಗಳನ್ನು ಸಂರಕ್ಷಿಸುವ ಕಾರ್ಯ ಜಿಲ್ಲಾಡಳಿತದಿಂದ ಬುಧವಾರವೂ ಮುಂದುವರೆಯಿತು.

ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ ಭುವನಗಿರಿ ಕಾಲೋನಿಯ ಅಶೋಕ್ ನಗರದ ಸರ್ವೆ ನಂಬರ್ 348 ರಲ್ಲಿನ ಒಟ್ಟು 11.59 ಎಕರೆ ಜಮೀನು ಕರ್ನಾಟಕ ಸರ್ಕಾರದ ಸ್ವತ್ತಾಗಿದ್ದು, ಬುಧವಾರ ಸ್ಥಳದಲ್ಲಿ ಜೆಸಿಬಿ ಯಂತ್ರಗಳ ಮೂಲಕ ಜಾಗವನ್ನು ಸಮತಟ್ಟುಗೊಳಿಸುವ ಮೂಲಕ ಗುರುತಿಸುವ ಕಾರ್ಯ ನಡೆಯಿತು.

ಒತ್ತುವರಿದಾರರಿಗೆ ಎಚ್ಚರಿಕೆ ನೀಡುವ ಫಲಕವನ್ನು ವಿವಾದಿತ ಸ್ಥಳದಲ್ಲಿ ಅಳವಡಿಸುವ ಮೂಲಕ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ನಾಮಫಲಕದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಠಿಣ ಕಾನೂನು ಕ್ರಮದ ಎಚ್ಚರಿಕೆ:

ಸರ್ಕಾರಿ ಜಮೀನುಗಳನ್ನು ಯಾರಾದರೂ ಒತ್ತುವರಿ ಮಾಡಿಕೊಂಡಲ್ಲಿ ಅಥವಾ ಅನಧಿಕೃತವಾಗಿ ಬಳಕೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಇಂತಹ ಜಾಗಗಳ ಬಗ್ಗೆ ಜಾಗರೂಕರಾಗಿರಬೇಕು ಮತ್ತು ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ತೆರವು ಕಾರ್ಯಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ ಹಾಗೂ ಕಂದಾಯ, ಪೊಲೀಸ್ ಅಧಿಕಾರಿಗಳು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular