HomeKarnatakaಶೇ. 12.5 ರಷ್ಟು ವೇತನ ಹೆಚ್ಚಳ ಒಪ್ಪದ ಸಾರಿಗೆ ನೌಕರರು, ಮೇ 20ರಿಂದ ಮುಷ್ಕರದ ಎಚ್ಚರಿಕೆ

ಶೇ. 12.5 ರಷ್ಟು ವೇತನ ಹೆಚ್ಚಳ ಒಪ್ಪದ ಸಾರಿಗೆ ನೌಕರರು, ಮೇ 20ರಿಂದ ಮುಷ್ಕರದ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಶೇಕಡ 12.5 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವುದನ್ನು ಒಪ್ಪದ ಕೆಎಸ್ಆರ್‌ಟಿಸಿ ಸೇರಿ 4 ನಿಗಮಗಳ ಸಾರಿಗೆ ನೌಕರರು ಮೇ 20ರಿಂದ ಮುಷ್ಕರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದರಿಂದಾಗಿ ಸಮಸ್ಯೆ ಬಿಗಡಾಯಿಸಿದೆ. ವೇತನ ಹೆಚ್ಚಳವನ್ನು 2024ರ ಏಪ್ರಿಲ್ ನಿಂದಲೇ ಜಾರಿಗೊಳಿಸಬೇಕು. ಶೇ. 25 ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಈ ಹಿಂದೆ ಮಾಡಲಾಗಿದ್ದ ವೇತನ ಪರಿಷ್ಕರಣೆಯ ಹಿಂಬಾಕಿ ಒಂದು ವರ್ಷ ಬಾಕಿ ಉಳಿದಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಗಿದೆ. ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಹೋರಾಟ ಕೈಗೊಳ್ಳುವುದಾಗಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.

2023ರ ಮಾರ್ಚ್ ವೇತನ ಪರಿಷ್ಕರಣೆಯ 26 ತಿಂಗಳ ಹಿಂಬಾಕಿ ಮೊತ್ತ 1271.92 ಕೋಟಿ ರೂ.ಗಳಲ್ಲಿ ಮೊದಲ ಕಂತಿನ 450 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದ್ದು ನೌಕರರ ಖಾತೆಗಳಿಗೆ ಜಮಾ ಆಗಿದೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಅವರಿಗೆ ಸಿಗುವ ಎಲ್ಲಾ ಸೌಲಭ್ಯ ನೀಡಬೇಕು. ಬಾಕಿ ಇರುವ ಭತ್ಯೆ ಮತ್ತು ರಜೆ ನಗದೀಕರಣದ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular