HomeLatest NewsGOOD NEWS : ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಬೆಂಗಳೂರಿನ ಕೆಲ ಕಂಪನಿಗಳಿಂದ 'ವರ್ಕ್ ಫ್ರಮ್...

GOOD NEWS : ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಬೆಂಗಳೂರಿನ ಕೆಲ ಕಂಪನಿಗಳಿಂದ ‘ವರ್ಕ್ ಫ್ರಮ್ ಹೋಮ್’ ನೀಡಲು ಚಿಂತನೆ.!

ಬೆಂಗಳೂರು :  ಇತ್ತೀಚಿನ ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂಧನ ಉಳಿತಾಯಕ್ಕಾಗಿ ವರ್ಕ್ ಫ್ರಮ್ ಹೋಮ್ (WFH) ಮತ್ತು ಆನ್‌ಲೈನ್ ಸಭೆಗಳಿಗೆ ಆದ್ಯತೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದರು. ಈ ಬೆನ್ನಲ್ಲೇ ಬೆಂಗಳೂರಿನ ಐಟಿ ವಲಯದಲ್ಲಿ ಸಂಚಲನ ಮೂಡಿದೆ.

ಹೌದು.   ಇಂಧನ ಉಳಿತಾಯ ಮತ್ತು ಆರ್ಥಿಕ ಮಿತವ್ಯಯದ ಉದ್ದೇಶದಿಂದ ಪೆಟ್ರೋಲ್-ಡೀಸೆಲ್ ಬಳಕೆ ಕಡಿಮೆ ಮಾಡಲು ವರ್ಕ್ ಫ್ರಂ ಹೋಂ ಮತ್ತು ಆನ್‌ಲೈನ್ ಸಭೆಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು.: ಪ್ರಧಾನಿಯವರ ಸಲಹೆಗೆ ಪೂರಕವಾಗಿ ಬೆಂಗಳೂರಿನ ಕೆಲವು ಪ್ರಮುಖ ಐಟಿ-ಬಿಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವ ಕುರಿತು ಗಂಭೀರ ಚಿಂತನೆ ನಡೆಸುತ್ತಿವೆ. ಈ ತಿಂಗಳು ಅಥವಾ ಮುಂದಿನ ತಿಂಗಳಿನಿಂದಲೇ ಇದು ಜಾರಿಗೆ ಬರುವ ಸಾಧ್ಯತೆ ಇದೆ.

ಪ್ರಧಾನಿಯವರ ಕರೆಗೆ ಸ್ಪಂದಿಸಿರುವ ಬೆಂಗಳೂರಿನ ಹಲವು ಪ್ರಮುಖ ಐಟಿ ಕಂಪನಿಗಳು ತಮ್ಮ ಹೈಬ್ರಿಡ್ ಮಾದರಿಯನ್ನು ಬದಲಿಸಿ, ಉದ್ಯೋಗಿಗಳಿಗೆ ಹೆಚ್ಚಿನ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು (WFH) ಅವಕಾಶ ನೀಡುವ ಬಗ್ಗೆ ಗಂಭೀರವಾಗಿ ಪರಿಲೋಚಿಸುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯೋಗಿಗಳ ಸಂಘಟನೆಯ ಮನವಿ: ಐಟಿ ಉದ್ಯೋಗಿಗಳ ಸಂಘಟನೆಯಾದ NITES, ದೇಶದ ಸುಮಾರು 5.8 ಮಿಲಿಯನ್ ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಕಡ್ಡಾಯಗೊಳಿಸುವಂತೆ ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ಪತ್ರ ಬರೆದಿದೆ. ಇದು ಇಂಧನ ಉಳಿತಾಯ ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡಲು ಸಹಕಾರಿ ಎಂಬುದು ಅವರ ವಾದ.

ನಾಸ್ಕಾಮ್ (Nasscom) ಸ್ಪಷ್ಟನೆ: ಐಟಿ ಕಂಪನಿಗಳ ಒಕ್ಕೂಟವಾದ ನಾಸ್ಕಾಮ್, ಈಗಾಗಲೇ ಹೆಚ್ಚಿನ ಕಂಪನಿಗಳು ಹೈಬ್ರಿಡ್ ಮಾದರಿಯಲ್ಲೇ ಕಾರ್ಯನಿರ್ವಹಿಸುತ್ತಿದ್ದು, ಪರಿಸ್ಥಿತಿಗೆ ತಕ್ಕಂತೆ ವರ್ಕ್ ಫ್ರಮ್ ಹೋಮ್ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಟ್ರಾವೆಲ್ಸ್ ಸಂಘದ ಆತಂಕ: ಈ ಬೆಳವಣಿಗೆಯಿಂದಾಗಿ ಕರ್ನಾಟಕ ರಾಜ್ಯ ಟ್ರಾವೆಲ್ಸ್ ಮಾಲೀಕರ ಸಂಘ (KSTOA) ಆತಂಕ ವ್ಯಕ್ತಪಡಿಸಿದೆ. ಐಟಿ ಉದ್ಯೋಗಿಗಳ ಸಾರಿಗೆಯನ್ನು ನಂಬಿರುವ ಸಾವಿರಾರು ಕ್ಯಾಬ್ ಚಾಲಕರು ಮತ್ತು ಮಾಲೀಕರ ಜೀವನೋಪಾಯಕ್ಕೆ ಸಂಚಕಾರ ಬರಲಿದೆ ಎಂದು ಅವರು ಈ ನಡೆಯನ್ನು ವಿರೋಧಿಸಿದ್ದಾರೆ.

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಇದು ತಾತ್ಕಾಲಿಕ ಪರಿಹಾರವಾಗಬಹುದು ಎಂದು ಸರ್ಕಾರ ಭಾವಿಸಿದರೆ, ಇನ್ನೊಂದೆಡೆ ಸಾರಿಗೆ ಮತ್ತು ರಿಯಲ್ ಎಸ್ಟೇಟ್ ವಲಯದ ಮೇಲೆ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular