HomeKarnatakaBREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಬೆಂಕಿ ಅವಘಡ

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಬೆಂಕಿ ಅವಘಡ

ಬೆಂಗಳೂರು: ಬಿಸಿಲ ಝಳ, ತಾಪಮಾನ ಏರಿಕೆ ನಡುವೆಯೇ ರಾಜ್ಯದಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ.

ನಾಯಂಡಹಳಿ ಬಳಿಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಏಕಾಏಕಿ ಬೆಂಕಿ ಸಂಭವಿಸಿದ್ದು, ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ಸುತ್ತಮುತ್ತಲ ಪ್ರದೇಶದವರೆಗೂ ದಟ್ಟ ಹೊಗೆ ಆವರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಭಾಗದಲಿ ಎಕರೆಗಟ್ಟಲೇ ಜಾಗದಲ್ಲಿ ಭಾರಿ ಪ್ರಮಾಣದಲ್ಲಿ ಪ್ಲಾಸ್ಟಿಕ್ ಗಳನ್ನು ಸಂಗ್ರಹಿಸಿ ಇಡಲಾಗಿದ್ದು, ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಧಗಧಗನೆ ಹೊತ್ತಿ ಉರಿಯುತ್ತಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಬೆಂಕಿ ನಂದಿಸುವ ವೇಳೆ ೨ ಅಗ್ನಿಶಾಮಕ ವಾಹನಗಳ ನೀರು ಖಾಲಿಯಾಗಿದ್ದು, ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ವ್ಯಾಪಕವಾಗಿ ಹರಡಲಾರಂಭಿಸಿತು. ಬಳಿಕ ಘಟ್ಜ಼್ನಾ ಸ್ಥಳಕ್ಕೆ ಇನ್ನಷ್ಟು ಅಗ್ನಿಶಾಮಕ ವಾಹನಗಳು, ಸಿಬ್ಬಂದಿಗಳು ಆಗಮಿಸಿ ಬೆಂಂಕಿಯನ್ನು ತಹಬದಿಗೆ ತಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular