HomeLatest NewsBREAKING: ಕೇರಳಂ ನೂತನ ಸಿಎಂ ಆಗಿ ವಿ.ಡಿ.ಸತೀಷನ್ ಆಯ್ಕೆ

BREAKING: ಕೇರಳಂ ನೂತನ ಸಿಎಂ ಆಗಿ ವಿ.ಡಿ.ಸತೀಷನ್ ಆಯ್ಕೆ

ತಿರುವನಂತಪುರಂ: ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಯುಡಿಎಫ್ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಕೊನೆಗೂ ನೂತನ ಮುಖ್ಯಮಂತ್ರಿ ಆಯ್ಕೆಯಾಗಿದೆ. ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ.

ಸಿಎಂ ಸ್ಥಾನಕ್ಕಾಗಿ ಕೆ.ಸಿ.ವೇಣುಗೋಪಾಲ್ ಹಾಗೂ ವಿ.ಡಿ.ಸತೀಷನ್ ನಡಿವೆ ಕೊನೇ ಹಂತದವರೆಗೂ ಪೈಪೋಟಿ ನಡೆದಿತ್ತು. ಆದರೆ ವಿ.ಡಿ.ಸತೀಶನ್ ಅವರಿಗೆ ಕೇರಳ ರಾಜ್ಯಾದ್ಯಂತ ಸಾರ್ವಜನಿಕ ಜನಬೆಂಬಲ ಹೆಚ್ಚಿರುವ ಹಿನ್ನೆಲೆಯಲ್ಲಿ ಹಾಗೂ ವಯನಾಡ್ ಕ್ಷೇತ್ರದಲ್ಲಿ ವೇಣುಗೋಪಾಲ್ ವಿರುದ್ಧ ಪೋಸ್ಟರ್ ಅಭಿಯಾನ ನಡೆಯುತ್ತಿರುವ ಕಾರಣಕ್ಕೆ ವಿ.ಡಿ.ಸತೀಷನ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿ.ಡಿ.ಸತೀಶನ್ ಪರವೂರು ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2021ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಕೂಡ ಆಗಿದ್ದವರು. ರಾಜ್ಯದಲ್ಲಿ ಸತೀಷನ್ ಅವರಿಗೆ ಭಾರಿ ಬೆಂಬಲ ಕೂಡ ಇರುವುದರಿಂದ ನೂತನ ಮುಖ್ಯಮಂತ್ರಿಯಾಗಿ ಸತೀಷನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular