HomeLatest NewsBIG NEWS: ಸಂಪುಟ ಪುನರ್ ರಚನೆ ಮಾಡಬೇಕು ಎಂದ ಸಿಎಂ ಸಿದ್ದರಾಮಯ್ಯ

BIG NEWS: ಸಂಪುಟ ಪುನರ್ ರಚನೆ ಮಾಡಬೇಕು ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸ ರೂಪದ ಪೇಟಾ ಧರಿಸುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿರೆಂ ಸಿದ್ದರಾಮಯ್ಯ, ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ ತಕರಾರಿಗೆ ಸಂಬಂಧಿಸಿದಂತೆ ಶಾಲಾ-ಕಲೇಜುಗಳಲ್ಲಿ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಕೇಸರಿ ಶಾಲು, ಹೊಸ ರೂಪದ ಪೇಟಾಗಳಿಗೆ ಅವಕಾಶವಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾವು ಹಿಜಾಬ್ ಗೆ ಮಾತ್ರವಲ್ಲ ಜನಿವಾರ, ಶಿವದಾರ, ರುದ್ರಾಕ್ಷಿ, ಉಡದಾರ ಎಲ್ಲದಕ್ಕೂ ಅವಕಾಶ ಕೊಟ್ಟಿದ್ದೇವೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಡೀಸಲ್ ಬಳಕೆ ಕಡಿತಗೊಳಿಸಲು ತಮ್ಮ ಬೆಂಗಾವಲನ್ನು ಕಡಿತಗೊಳಿಸಿದ್ದು ಈ ಬಗ್ಗೆ ಕರ್ನಾಟಕದಲ್ಲಿಯೂ ಮಾಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದು ಕೇವಲ ತಾತ್ಕಾಲಿಕ ಕ್ರಮವಷ್ಟೇ. ಪ್ರಧಾನಿಗಳು ಹೇಳಿರುವುದು ಸರಿಯಾದ ಕ್ರಮವಲ್ಲ. ಅದಕ್ಕೆ ಬದಲು ಬೇರೆ ದೇಶಗಳೊಂದಿಗೆ ಮಾತನಾಡಿ ಒಮ್ಮತಕ್ಕೆ ಬರುವುದು ಸೂಕ್ತ ಎಂದರು.

ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ, ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ. ಆದರೆ ಈ ತಿಂಗಳ 15ಕ್ಕೆ ದೆಹಲಿಗೆ ಹೋಗುತ್ತಿಲ್ಲ. ಹೈಕಮಾಂಡ್ ನಾಯಕರು ಕರೆದರೆ ಮಾತ್ರ ಹೋಗುತ್ತೇನೆ. ಸಚಿವ ಸಂಪುಟ ಪುನಾರಚನೆ ಮಾಡಬೇಕು ಎಂದು ಹೇಳಿದರು.

ಇನ್ನು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ, ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಸರಿಯಾಗಿ ನಿರ್ವಹಿಸಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular