HomeKarnatakaಉದ್ಯೋಗಾಂಕ್ಷಿಗಳೇ ಗಮನಿಸಿ ; ಮೇ 21 ರಂದು ಕ್ಯಾಂಪಸ್ ಸಂದರ್ಶನ

ಉದ್ಯೋಗಾಂಕ್ಷಿಗಳೇ ಗಮನಿಸಿ ; ಮೇ 21 ರಂದು ಕ್ಯಾಂಪಸ್ ಸಂದರ್ಶನ

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಪ್ರದೇಶದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಂಗಳೂರಿನ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.ಮೇ 21 ರಂದು ಬೆಳಿಗ್ಗೆ 9 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.

*ಅರ್ಹತೆ

ಫಿಟ್ಟರ್, ಟರ್ನರ್, ಎಲೆಕ್ಟಿçಷಿಯನ್, ವೆಲ್ಡರ್, ಇ.ಎಂ., ಎಂ.ಎA.ವಿ., ಡೀಸೆಲ್ ಮೆಕ್ಯಾನಿಕ್, ಎಂ.ಇ.ವಿ ವೃತ್ತಿಗಳಲ್ಲಿ ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವವರು ಅಥವಾ ಐಟಿಐ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಅಗತ್ಯವಿರುವ ದಾಖಲೆಗಳು

ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಇತ್ತೀಚಿನ ಭಾವಚಿತ್ರಗಳು, ಆಧಾರ್ ಕಾರ್ಡ್ ಪ್ರತಿ, ಬಯೋಡೇಟಾ, ತಮ್ಮ ಸ್ಮಾರ್ಟ್ ಫೋನ್ ಅನ್ನು ತಪ್ಪದೇ ತರಬೇಕು.

ಅಭ್ಯರ್ಥಿಗಳ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.ಅರ್ಹ ಅಭ್ಯರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಾಚಾರ್ಯ ಕೆ.ಹೆಚ್.ಎಂ. ಪಂಡಿತಾರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬುಡಕಟ್ಟುಗಳ ಆಯೋಗದ ಬಳ್ಳಾರಿ ಜಿಲ್ಲೆಗೆ

ಬಳ್ಳಾರಿ : ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ. ಎಲ್ ಅವರು ಬಳ್ಳಾರಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ಮೇ 18 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮೇ 18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ಕುಂದುಕೊರತೆಗಳ ಸಭೆ ಮತ್ತು ಅಹವಾಲು ಸ್ವೀಕಾರ ಮಾಡುವರು.

ಬಳಿಕ ಮಧ್ಯಾಹ್ನ 2.15 ಗಂಟೆಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪತ್ರಿಕಾ ಗೋಷ್ಠಿ ನಡೆಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

*ಸಾರ್ವಜನಿಕರಿಗೆ ಮನವಿ

ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಮತ್ತು ಸಾರ್ವಜನಿಕರು ಈ ಕುಂದುಕೊರತೆಗಳ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular