HomeKarnatakaರೈತರು ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಂದ ಡಿಪ್ಲೋಮಾ ಕೃಷಿ ಕೋರ್ಸ್’ಗೆ ಅರ್ಜಿ ಆಹ್ವಾನ

ರೈತರು ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಂದ ಡಿಪ್ಲೋಮಾ ಕೃಷಿ ಕೋರ್ಸ್’ಗೆ ಅರ್ಜಿ ಆಹ್ವಾನ

ಮಡಿಕೇರಿ  :  ಪ್ರಸಕ್ತ (2026-27) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್‍ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, 2026 ರ ಜೂನ್, 12 ರವರೆಗೆ ಅರ್ಜಿಯನ್ನು www.uahs.edu.in ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಬಹುದು. ಅರ್ಜಿ ಸಲ್ಲಿಸಲು ಜೂನ್, 12 ಕೊನೆಯ ದಿನವಾಗಿದೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45 (ಕನಿಷ್ಠ ಶೇ. 40 ಪ.ಜಾ. ಮತ್ತು ಪ.ಪಂ./ಪ್ರವರ್ಗ-1) ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50 ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೊಮಾ ಕೋರ್ಸ್‍ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಇರುತ್ತದೆ.

ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ 576213, ಉಡುಪಿ ಜಿಲ್ಲೆ.ದೂರವಾಣಿ 9108241342, 9686405090, 8884141445 ನ್ನು ಸಂಪರ್ಕಿಸಬಹುದು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲ ಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನೂನು ಪದವೀಧರರಿಗೆ ತರಬೇತಿ

ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2026-27ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ತರಬೇತಿ ಪಡೆಯಲು ವರ್ಗ- 1 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.2.50 ಲಕ್ಷ ಒಳಪಟ್ಟಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 2 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದೊಳಗಿರಬೇಕು, ಪ್ರವರ್ಗ 2ಎ, 3ಎ, 3ಬಿ ರ ಅಭ್ಯರ್ಥಿಗಳಿಗೆ 38 ವರ್ಷದೊಳಗಿರಬೇಕು.

ಅಭ್ಯರ್ಥಿಯು ತನ್ನ ಹೆಸರನ್ನು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿರಬೇಕು. ಕಾನೂನು ತರಬೇತಿಯು 04 ವರ್ಷಗಳ ಅವಧಿಯಾಗಿದ್ದು ಮಾಸಿಕ ರೂ.4 ಸಾವಿರ ಶಿಷ್ಯವೇತನ ನೀಡಲಾಗುವುದು. ಕಾನೂನು ತರಬೇತಿಯನ್ನು ಕೊಡಗು ಜಿಲ್ಲೆಯಿಂದ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ನೀಡಲು ಅವಕಾಶವಿದೆ. ಆಯ್ಕೆಯಾದ ಅಭ್ಯರ್ಥಿಯು ವಕೀಲ ತರಬೇತಿಗೆ ಹೋಗುವ ಮುನ್ನ, ತರಬೇತಿ ಮಧ್ಯದಲ್ಲಿ ಬಿಟ್ಟಲ್ಲಿ ತರಬೇತಿ ವೆಚ್ಚಕ್ಕೆ ಶೇ.10 ರಂತೆ ಬಡ್ಡಿ ಸೇರಿಸಿ ಸರ್ಕಾರಕ್ಕೆ ಪಾವತಿ ಮಾಡುತ್ತೇನೆಂದು ರೂ.100 ರ ಛಾಪಾ ಕಾಗದಲ್ಲಿ ಬರೆದುಕೊಡತಕ್ಕದ್ದು.

ಅರ್ಜಿ ನಮೂನೆಯನ್ನು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿಯಿಂದ ಪಡೆದು ಜೂನ್, 12 ರೊಳಗೆ ಕಚೇರಿ ವೇಳೆಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಹಾಗೂ ದೂರವಾಣಿ ಸಂಖ್ಯೆ 08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular