HomeLive NewsBIG NEWS: ಶ್ರೀಮಂತ ಯುವಕರೇ ಇವರ ಟಾರ್ಗೆಟ್: ಹನಿಟ್ರ್ಯಾಪ್ ಗ್ಯಾಂಗ್ ನ ಐವರು ಆರೋಪಿಗಳು ಅರೆಸ್ಟ್

BIG NEWS: ಶ್ರೀಮಂತ ಯುವಕರೇ ಇವರ ಟಾರ್ಗೆಟ್: ಹನಿಟ್ರ್ಯಾಪ್ ಗ್ಯಾಂಗ್ ನ ಐವರು ಆರೋಪಿಗಳು ಅರೆಸ್ಟ್

ದಾವಣಗೆರೆ: ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐವರು ಆರೋಪಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಶ್ರೀಮಂತ ಯುವಕರನ್ನು ಪರಿಚಯಿಸಿಕೊಂಡು ಅವರನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಆರೋಪಿ ಯುವತಿಯರು, ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅವರ ಮೇಲೆ ಹಲ್ಲೆ ನಡೆಸಿ ಹಣ, ಚಿನ್ನಾಭರಣಗಳನ್ನು ದೋಚುತ್ತಿದ್ದರು.

ಪ್ರಕರಣ ಸಂಬಂಧ ಪಂಚಮಿ (34), ಜಗದೀಶ (35), ಗಂಗಾ ಮಲ್ಲೇಶ್ ನಾಯ್ಕ (25) ಹಾಗೂ ವೆಂಕಟೇಶ್ (30) ಎಂಬವವರನ್ನು ಬಂಧಿಸಲಾಗಿದೆ. ಆರೋಪಿಗಳು ಮೊದಲು ಶ್ರೀಮಂತ ಹಿನ್ನೆಲೆಯುಳ್ಳ ಯುವಕರನ್ನು ಟಾರ್ಗೆಟ್ ಮಾಡುತ್ತಿತ್ತು. ಗ್ಯಾಂಗ್‌ನ ಸದಸ್ಯೆ ಪಂಚಮಿ ಶ್ರೀಮಂತ ಯುವಕನೊಬ್ಬನೊಂದಿಗೆ ಸ್ನೇಹ ಬೆಳೆಸಿ, ಹರಿಹರ ತಾಲೂಕಿನ ಶಿವನಹಳ್ಳಿ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡಿದ್ದಾಳೆ. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಜಗದೀಶ, ಗಂಗಾ ಮಲ್ಲೇಶ್ ನಾಯ್ಕ, ವೆಂಕಟೇಶ್ ಹಾಗೂ ಮತ್ತೊಬ್ಬ ಆರೋಪಿ ಧಾವಿಸಿ ಬಂದು ಯುವಕನ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಇಡೀ ಗ್ಯಾಂಗ್ ಅನ್ನು ಜೈಲಿಗಟ್ಟಿದ್ದಾರೆ. ಈ ತಂಡ ಇನ್ನೂ ಹಲವು ಯುವಕರಿಗೆ ವಂಚಿಸಿರುವ ಶಂಕೆ ಇದ್ದು, ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular