HomeKarnatakaBREAKING: ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು

BREAKING: ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಕ್ಯಾಂಟರ್ ವಾಹನ ಹಾಗೂ ಇವಿ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗದಲ್ಲಿ ನಡೆದಿದೆ.

ನೆಲಮಂಗಲ ತಾಲ್ಲೂಕಿನ ಮಾದಾವರದಲ್ಲಿ ಈ ಅಪಘಾತ ಸಂಭವಿಸಿದೆ. ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಎಲೆಕ್ಟ್ರಿಕ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಲೋಕೇಶ್ (45) ಮೃತ ದುರ್ದೈವಿ.

ಇಂದು ಮಧ್ಯಾಹ್ನ ಸುಮಾರು 2:30 ರ ವೇಳೆಗೆ ಈ ಘಟನೆ ನಡೆದಿದೆ. ಹೆದ್ದಾರಿಯಲ್ಲಿ ಮುಂದೆ ವೇಗವಾಗಿ ಸಾಗುತ್ತಿದ್ದ ಕ್ಯಾಂಟರ್ ವಾಹನ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾನೆ. ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಕ್ಯಾಂಟರ್ ಗೆ ಡಿಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಲೋಕೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular