HomeKarnatakaಮೇ 18 ರಿಂದ ಭದ್ರಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ

ಮೇ 18 ರಿಂದ ಭದ್ರಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ

ಶಿವಮೊಗ್ಗ: ಭದ್ರಾ ಜಲಾಶಯದಿಂದ ಮೇ.18 ರಿಂದ 23 ರವರೆಗೆ ಪ್ರತಿದಿನ 2000 ಕ್ಯೂಸೆಕ್ಸ್ ನಂತೆ ನೀರನ್ನು ಹರಿಸಲಾಗುವುದು.

ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗಾಗಿ ತುಂಗಭದ್ರಾ ನದಿಯ ನೀರನ್ನು ಅವಲಂಭಿಸಿರುವ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ನೀರನ್ನು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ.18 ರಿಂದ 23 ರವರೆಗೆ ಪ್ರತಿದಿನ 2000 ಕ್ಯೂಸೆಕ್ಸ್ ನಂತೆ ನೀರನ್ನು ಹರಿಸಲಾಗುವುದು.

 ಆದುದರಿಂದ ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದು ಇತ್ಯಾದಿ ಮಾಡಬಾರದೆಂದು ಎಚ್ಚರಿಕೆ ನೀಡಲಾಗಿದೆ. ಮೇಲೆ ತಿಳಿಸಿದ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್‌ಸೆಟ್‌ಗಳಿAದ ನೀರೆತ್ತುವುದನ್ನೂ ಸಹ ನಿಷೇಧಿಸಲಾಗಿದೆ ಎಂದು ಬಿ.ಆರ್. ಪ್ರಾಜೆಕ್ಟ್, ಭದ್ರಾ ಜಲಾಶಯ ಯೋಜನೆ ಕುಡಿಯುವ ನೀರಿನ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular