HomeKarnatakaಸಕಾಲಕ್ಕೆ ಚಿಕಿತ್ಸೆ ಸಿಗದೇ ಬಾಲಕ ಸಾವು: ಆಸ್ಪತ್ರೆ ಬಳಿ ಶವ ಇಟ್ಟು, ರಸ್ತೆ ತಡೆದು ಪ್ರತಿಭಟನೆ

ಸಕಾಲಕ್ಕೆ ಚಿಕಿತ್ಸೆ ಸಿಗದೇ ಬಾಲಕ ಸಾವು: ಆಸ್ಪತ್ರೆ ಬಳಿ ಶವ ಇಟ್ಟು, ರಸ್ತೆ ತಡೆದು ಪ್ರತಿಭಟನೆ

ಧಾರವಾಡ: ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕಿಟ್ ಮತ್ತು ವೈದ್ಯರಿಲ್ಲದ ಆರೋಪ ಕೇಳಿ ಬಂದಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಶವ ಇಟ್ಟು ಪ್ರತಿಭಟನೆ ನಡೆಸಲಾಗಿದೆ.

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದಲ್ಲಿ ವಿದ್ಯುತ್ ತಂಂತಿ ಸ್ಪರ್ಶಿಸಿ ಗಂಭೀರ ಗಾಯಗೊಂಡಿದ್ದ ಬಾಲಕ ಕಾರ್ತಿಕ್ ಪೂಜಾರ್(12) ನನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಕುಂದಗೋಳ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಲಾಗಿದೆ.

ಆಂಬುಲೆನ್ಸ್ ನಲ್ಲಿ ಕುಂದಗೋಳ ಆಸ್ಪತ್ರೆಗೆ ಸಾಗಿಸುವಾಗ ಬಾಲಕ ಮೃತಪಟ್ಟಿದ್ದು, ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕಿಟ್ ಇರಲಿಲ್ಲ. ವೈದ್ಯರು ಕೂಡ ಇರಲಿಲ್ಲ. ಸಕಾಲಕ್ಕೆ ಚಿಕಿತ್ಸೆ ಸಿಗದೇ ಬಾಲಕ ಮೃತಪಟ್ಟಿದ್ದಾನೆ ಎಂದು ಗುಡಗೇರಿ ಸರ್ಕಾರಿ ಆಸ್ಪತ್ರೆಯ ಹೆಸರು ಶವ ಇಟ್ಟು ಪ್ರತಿಭಟನೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಕ್ಷ್ಮೇಶ್ವರ -ಹುಲಗೂರು ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಧಾರವಾಡ ಎಸಿ, ಡಿಎಸ್‍ಪಿ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಿದ್ದಾರೆ. ಗುಡಗೇರಿ ಆಸ್ಪತ್ರೆಗೆ ಅಗತ್ಯ ವೈದ್ಯರನ್ನು ನೇಮಕ ಮಾಡುವ ಭರವಸೆ ನೀಡಿದ್ದಾರೆ. ಅಲ್ಲದೆ, ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರದ ಭರವಸೆ ನೀಡಿದ್ದು, ಬಳಿಕ ಗ್ರಾಮದ ಜನ ಪ್ರತಿಭಟನೆ ವಾಪಸ್ ಪಡೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular