HomeKarnatakaಮಕ್ಕಳಿಗೆ ಈಜಲು ಕಲಿಸುವಾಗ ದುರಂತ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ, ಇಬ್ಬರು ಮಕ್ಕಳು ದಾರುಣ ಸಾವು

ಮಕ್ಕಳಿಗೆ ಈಜಲು ಕಲಿಸುವಾಗ ದುರಂತ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ, ಇಬ್ಬರು ಮಕ್ಕಳು ದಾರುಣ ಸಾವು

ಕೋಲಾರ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಕೂಲಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶ್ರೀನಿವಾಸ್ (41), ಮಕ್ಕಳಾದ ಚೇತನ್(13), ರಾಜೇಶ್ (8) ಮೃತ ದುರ್ದೈವಿಗಳು. ನಕ್ಕನಹಳ್ಳಿಯ ಈರಪ್ಪ ಎಂಬುವವರಿಗೆ ಸೇರಿದ ಕೃಷಿ ಹೊಂಡದಲ್ಲಿ ಈ ದುರಂತ ಸಂಭವಿಸಿದೆ. ತಂದೆ ಶ್ರೀನಿವಾಸ್, ಇಬ್ಬರು ಮಕ್ಕಳಿಗೂ ಈಜಲು ಕಲಿಸಲು ಕೃಷಿ ಹೊಂಡಕ್ಕೆ ಕರೆದೊಯ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೂವರೂ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತಿ ಹಾಗೂ ಇಬ್ಬರು ಮಕ್ಕಳನ್ನು ಕಳೆದುಕೊಂಡಿರುವ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular