ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ಮಾಡುವ ಬಗ್ಗೆ ಪ್ರೊ. ಸುಖದೇವ್ ಥೋರಟ್ ಆಯೋಗದ ಅಂತಿಮ ವರದಿಯನ್ನು ಪರಿಶೀಲಿಸಿ ಸೂಕ್ತ ಶಿಫಾರಸು ಮಾಡಲು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಮಿತಿಯಲ್ಲಿ ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರನ್ನು ಸಂಪುಟ ಉಪಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ.


