HomeKarnatakaಜನರ ದೂರುಗಳಿಗೆ ಸ್ಪಂದಿಸದ ಠಾಣಾಧಿಕಾರಿ ವಿರುದ್ಧ ಶಿಸ್ತು ಕ್ರಮ: ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್...

ಜನರ ದೂರುಗಳಿಗೆ ಸ್ಪಂದಿಸದ ಠಾಣಾಧಿಕಾರಿ ವಿರುದ್ಧ ಶಿಸ್ತು ಕ್ರಮ: ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ

ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಜನರ ದೂರುಗಳಿಗೆ ಸೂಕ್ತವಾಗಿ ಸ್ಪಂದಿಸದಿದ್ದಲ್ಲಿ ಅಂತಹ ಠಾಣಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ನಗರ ಸಶಸ್ತ್ರ ಮೀಸಲು ಪಡೆ ಉತ್ತರ ವಿಭಾಗ ಆಯೋಜಿಸಿದ್ದ ಮಾಸಿಕ ಕವಾಯತ್ ನಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಇತ್ತೀಚೆಗೆ ಪೊಲೀಸ್ ಠಾಣೆಗಳಿಗೆ ಆಗಮಿಸುವ ಜನರಿಗೆ ಪೊಲೀಸರು ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಸಾರ್ವಜನಿಕರ ದೂರುಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ. ಆ ಬಗ್ಗೆ ವಿಚಾರಣೆ ನಡೆಸುತ್ತಿಲ್ಲ ಎನ್ನುವುದು ಗಮನಕ್ಕೆ ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸ್ ಠಾಣೆಗಳಿಗೆ ನಿಯಮಿತವಾಗಿ ಡಿಸಿಪಿ, ಎಸಿಪಿಗಳು ಭೇಟಿ ನೀಡಬೇಕು. ಠಾಣಾಮಟ್ಟದಲ್ಲಿ ಜನರ ಅಹವಾಲು ಆಲಿಸಿ ವಿಲೇವಾರಿಗೆ ಕ್ರಮ ಜರುಗಿಸಬೇಕು. ಇನ್ನು ಮುಂದೆ ಮೇಲಾಧಿಕಾರಿಗಳ ಬಳಿ ಜನರು ದೂರು ತಂದರೆ ಅವುಗಳನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗುವುದು. ಠಾಣೆಯ ಮಟ್ಟದಲ್ಲಿ ನಾಗರಿಕ ಸಮಸ್ಯೆಗಳಿಗೆ ಸ್ಪಂದಿಸದಿದ್ದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು. ಜನಸ್ನೇಹಿ ಆಡಳಿತ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular