HomeKarnatakaJOB ALERT : ಉದ್ಯೋಗಾಕಾಂಕ್ಷಿಗಳಿಗಾಗಿ ಮೇ 21 ರಂದು ಉದ್ಯೋಗ ನೇರ ಸಂದರ್ಶನ

JOB ALERT : ಉದ್ಯೋಗಾಕಾಂಕ್ಷಿಗಳಿಗಾಗಿ ಮೇ 21 ರಂದು ಉದ್ಯೋಗ ನೇರ ಸಂದರ್ಶನ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 21 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ‘ಇಸುಝ ಮೋಟರ‍್ಸ್ ಇಂಡಿಯಾ ಲಿ.,’ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ಪಿಯುಸಿ, ಕಾಮರ್ಸ್/ ಬಿಕಾಂ, ಐಟಿಐ-ಡಿಸೆಲ್ ಫಿಟ್ಟರ್ಸ್, ಡಿಪ್ಲೊಮಾ ಇನ್ ಮೆಕಾನಿಕಲ್ ಇಂಜಿನಿಯರಿಂಗ್ ಪೂರೈಸಿದ, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular