HomeLatest Newsಜಾಮೀನು ನಿರಾಕರಣೆ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ  ಕಣ್ಣೀರು : ಸೋಶಿಯಲ್ ಮೀಡಿಯಾದಲ್ಲಿ ‘ಹಾರ್ಟ್ ಬ್ರೇಕ್’...

ಜಾಮೀನು ನಿರಾಕರಣೆ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ  ಕಣ್ಣೀರು : ಸೋಶಿಯಲ್ ಮೀಡಿಯಾದಲ್ಲಿ ‘ಹಾರ್ಟ್ ಬ್ರೇಕ್’ ಪೋಸ್ಟ್.!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಹೊರತರಲು ಅವರ ಪತ್ನಿ ವಿಜಯಲಕ್ಷ್ಮಿ ಹರಸಾಹಸಪಡುತ್ತಿದ್ದಾರೆ. ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್‌ನಿಂದ ಜಾಮೀನು ಅರ್ಜಿ ತಿರಸ್ಕೃತಗೊಂಡಿರುವುದು ದರ್ಶನ್ ಕುಟುಂಬ ಹಾಗೂ ಅಭಿಮಾನಿಗಳಿಗೆ ದೊಡ್ಡ ಆಘಾತ ನೀಡಿದೆ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶ: ಇತ್ತೀಚೆಗೆ ಜಾಮೀನು ಕೋರಿ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್ ಸದ್ಯಕ್ಕೆ ಜಾಮೀನು ನೀಡಲು ನಿರಾಕರಿಸಿದ್ದು, ಒಂದು ವರ್ಷದೊಳಗೆ ಪ್ರಕರಣದ ವಿಚಾರಣೆಯನ್ನು ಕಡ್ಡಾಯವಾಗಿ ಮತ್ತು ತೀವ್ರಗತಿಯಲ್ಲಿ ಮುಗಿಸುವಂತೆ ಕೆಳ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಮುಂದಿನ ಒಂದು ವರ್ಷದಲ್ಲಿ 60 ಪ್ರಮುಖ ಸಾಕ್ಷಿಗಳನ್ನು ದಿನನಿತ್ಯದ ಆಧಾರದ ಮೇಲೆ ವಿಚಾರಣೆ ನಡೆಸಬೇಕು ಎಂದು ಕೋರ್ಟ್ ತಿಳಿಸಿದೆ. ವಿಚಾರಣೆಯಲ್ಲಿ ಗಣನೀಯ ಪ್ರಗತಿ ಇಲ್ಲದಿದ್ದರೆ, ಆ ಬಳಿಕವಷ್ಟೇ ನಟ ದರ್ಶನ್ ಜಾಮೀನಿಗಾಗಿ ಮತ್ತೆ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಕಳೆದ ಏಳು ತಿಂಗಳುಗಳಲ್ಲಿ ಪ್ರಾಸಿಕ್ಯೂಷನ್ ಕೇವಲ 10 ಸಾಕ್ಷಿಗಳನ್ನು ವಿಚಾರಣೆ ನಡೆಸಿರುವುದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕೋರ್ಟ್‌ನ ಈ ಆದೇಶದಿಂದಾಗಿ ದರ್ಶನ್ ಸದ್ಯಕ್ಕೆ ಜೈಲಿನಿಂದ ಹೊರಬರುವುದು ಕಷ್ಟ ಎನ್ನುವಂತಾಗಿದ್ದು, ವಿಜಯಲಕ್ಷ್ಮಿ ಅವರ ನಂಬಿಕೆ ಛಿದ್ರವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಲಕ್ಷ್ಮಿ ಅವರ ಭಾವುಕ ಪೋಸ್ಟ್: ಈ ಎಲ್ಲ ಬೆಳವಣಿಗೆಗಳಿಂದ ತೀವ್ರ ಬೇಸರಗೊಂಡಿರುವ ವಿಜಯಲಕ್ಷ್ಮಿ ಅವರು, ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಅವರ ಬ್ಲ್ಯಾಕ್ ಅಂಡ್ ವೈಟ್ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅದಕ್ಕೆ ದರ್ಶನ್ ಅಭಿನಯದ ‘ಲಂಕೇಶ್ ಪತ್ರಿಕೆ’ ಚಿತ್ರದ “ಆ ಮೋಡದಿಂದ…” ಹಾಡನ್ನು ಹಿನ್ನೆಲೆಯಾಗಿ ಬಳಸಿ, ಮುರಿದ ಹೃದಯದ (Broken Heart 💔) ಸಿಂಬಲ್ ಹಾಕಿದ್ದಾರೆ. ಈ ಪೋಸ್ಟ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಡಿ ಬಾಸ್ ಅಭಿಮಾನಿಗಳು ಕೂಡ ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular