HomeKarnatakaಕರಾವಳಿ ಜನತೆಗೆ ಗುಡ್ ನ್ಯೂಸ್: ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಿಎಂ ಮನವಿ: ಮುಖ್ಯ...

ಕರಾವಳಿ ಜನತೆಗೆ ಗುಡ್ ನ್ಯೂಸ್: ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಿಎಂ ಮನವಿ: ಮುಖ್ಯ ನ್ಯಾಯಮೂರ್ತಿಗೆ ಪತ್ರ

ಬೆಂಗಳೂರು: ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದು, ವಿ: ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ.

ಕರಾವಳಿ ಭಾಗದ ಜನರಿಗೆ ತ್ವರಿತ ನ್ಯಾಯದಾನ ಕಲ್ಪಿಸಲು ಹಾಗೂ ಸರ್ವರಿಗೂ ನ್ಯಾಯದ ಲಭ್ಯತೆಯನ್ನು ಖಾತ್ರಿಪಡಿಸಲು ರಾಜ್ಯ ಸರ್ಕಾರವು ಬದ್ಧವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವಂತೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯಿಂದ ನ್ಯಾಯದಾನದ ವಿಕೇಂದ್ರೀಕರಣ, ಸಕಾಲಿಕ ಹಾಗೂ ಕೈಗೆಟುಕುವ ನ್ಯಾಯದ ಸಾಂವಿಧಾನಿಕ ಭರವಸೆಯನ್ನು ಬಲಪಡಿಸಿದಂತಾಗಲಿದೆ. ಜೊತೆಗೆ ಪ್ರಧಾನ ಪೀಠದ ಮೇಲಿನ ಬಾಕಿ‌ ಪ್ರಕರಣಗಳ ಒತ್ತಡವು ಗಣನೀಯವಾಗಿ ತಗ್ಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯ ಸುಮಾರು 50,000 ಚದರ ಅಡಿ ವಿಸ್ತೀರ್ಣದ ಭೂಮಿ‌ ಲಭ್ಯವಿದೆ. ಪೀಠವು ಸುಗಮವಾಗಿ ಕಾರ್ಯನಿರ್ವಹಿಸಲು ನಾಗರಿಕ, ಆಡಳಿತಾತ್ಮಕ ಮತ್ತು ಲಾಜಿಸ್ಟಿಕ್ ಮೌಲ್ಯಸೌಕರ್ಯವನ್ನು ಒದಗಿಸಲು ನಮ್ಮ ಸರ್ಕಾರ ಸಿದ್ಧವಿದೆ ಎನ್ನುವುದನ್ನು ಸಹ ಪತ್ರದ ಮೂಲಕ‌ ನ್ಯಾಯಮೂರ್ತಿಗಳ ಗಮನಕ್ಕೆ ತಂದಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ಹೋರಾಟ

ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘ ಇಂದಿನಿಂದ ವಕೀಲರ ಭವನದ ಮುಂಭಾಗ ಅನಿರ್ಧಿಷ್ಟಾವಧಿ ಹೋರಾಟ ಪ್ರಾರಂಭಿಸಿದ್ದು, ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ , ಛೇಂಬರ್ ಆಫ್ ಕಾಮರ್ಸ್, ಇನ್ನಿತರ ಸಂಘಟನೆಗಳು ಬೆಂಬಲ ಸೂಚಿಸಿದೆ.

ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಬೇಕೇಬೇಕು. ಶಿವಮೊಗ್ಗವನ್ನು ಕೇಂದ್ರವಾಗಿರಿಸಿ ಇಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಲಾಗಿದೆ. ಯಾವುದೇ ಕಾರಣಕ್ಕೂ ಮಂಗಳೂರಿನಲ್ಲಿ ಹೈಕೋರ್ಟ್ ಪೀಠವಾದರೆ ಶಿವಮೊಗ್ಗದ ಕೇಸುಗಳನ್ನು ಅಲ್ಲಿಗೆ ವರ್ಗಾಯಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ನಾಳೆಯಿಂದ ಹೋರಾಟಕ್ಕೆ ಕಾವು ಏರಲಿದ್ದು, ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸುತ್ತಿದೆ.

ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಸ್ವಾಮಿ, ಹೈಕೋರ್ಟ್ ಪೀಠ ಸ್ಥಾಪನೆ ಹೋರಾಟ ಸಮಿತಿಯ ಅಧ್ಯಕ್ಷ ಬಸವನಗೌಡ್ರು, ವೇದಿಕೆಯ ಕೆ.ವಿ.ವಸಂತ್‌ಕುಮಾರ್, ಸತೀಶ್‌ಕುಮಾರ್ ಶೆಟ್ಟಿ, ಅಶೋಕ್ ಕುಮಾರ್ ಗಾಂಧಿಬಸಪ್ಪ ಮತ್ತಿತರರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular