HomeJobsಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 15ಕ್ಕೂ ಹೆಚ್ಚು ಪ್ರಮುಖ ಕಂಪನಿಗಳಲ್ಲಿ ಉದ್ಯೋಗಾವಕಾಶ

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 15ಕ್ಕೂ ಹೆಚ್ಚು ಪ್ರಮುಖ ಕಂಪನಿಗಳಲ್ಲಿ ಉದ್ಯೋಗಾವಕಾಶ

ಬಳ್ಳಾರಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಮೇ 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮೋಕಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಾರಿಗೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ 15ಕ್ಕೂ ಹೆಚ್ಚು ಪ್ರಮುಖ ಕಂಪನಿಗಳು ಭಾಗವಹಿಸುತ್ತಿದ್ದು, ಇದರಲ್ಲಿ ಪ್ರಮುಖವಾಗಿ ಸ್ಥಳೀಯ ಕಂಪನಿಗಳು ಸಹ ಪಾಲ್ಗೊಳ್ಳಲಿವೆ. ಕಂಪನಿಗಳು ತಮ್ಮಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ.

ಅರ್ಹತೆ ಮತ್ತು ವಯೋಮಿತಿ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಮುಗಿಸಿರುವ 18 ರಿಂದ 40 ವರ್ಷ ವಯೋಮಿತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಹಾಗೂ ವಿದ್ಯಾರ್ಹತೆಯ ಸ್ವ-ವಿವರಗಳ ಪ್ರತಿಯೊಂದಿಗೆ ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.7619207762, 7676774293, 9663263086, 6360408094 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular