ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಜೂ. 1 ರಿಂದ ಬೀದರ್- ಬೆಂಗಳೂರು ವಿಮಾನ ಸೇವೆ ಪುನರಾರಂಭವಾಗಲಿದೆ.
ಸ್ಟಾರ್ ಏರ್ ವತಿಯಿಂದ ಬೀದರ್–ಬೆಂಗಳೂರು ವಿಮಾನ ಸೇವೆ ಮತ್ತೆ ಆರಂಭವಾಗುತ್ತಿದೆ. ಈ ಸೇವೆಯ ಪುನರಾರಂಭದಿಂದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಂಚಾರ, ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಹೂಡಿಕೆ ಕ್ಷೇತ್ರಗಳಲ್ಲಿ ಹೆಚ್ಚಿನ ಅನುಕೂಲವಾಗಲಿದೆ.
ವಿಮಾನ ವೇಳಾಪಟ್ಟಿ:
ಬೆಂಗಳೂರುದಿಂದ ಬೆಳಿಗ್ಗೆ 6:30ಕ್ಕೆ ಹೊರಟು 7:45ಕ್ಕೆ ಬೀದರ್ ತಲುಪಲಿದೆ.
ಬೀದರ್‌ನಿಂದ ಬೆಳಿಗ್ಗೆ 8:15ಕ್ಕೆ ಹೊರಟು 9:30ಕ್ಕೆ ಬೆಂಗಳೂರು ತಲುಪಲಿದೆ.
ಈ ಕುರಿತಾಗಿ ಮಾಹಿತಿ ಹಂಚಿಕೊಂಡಿರುವ ಸಚಿವ ಈಶ್ವರ್ ಖಂಡ್ರೆ, ಬೀದರ್ – ಬೆಂಗಳೂರು ವಿಮಾನ ಸೇವೆ ಜೂನ್ 1ರಿಂದ ಪುನರಾರಂಭಗೊಳ್ಳುತ್ತಿರುವುದು ಅತ್ಯಂತ ಸಂತಸದ ವಿಷಯ. ನಿರಂತರ ಪ್ರಯತ್ನಗಳ ಫಲವಾಗಿ ಸ್ಟಾರ್ ಏರ್ ವತಿಯಿಂದ ಬೀದರ್–ಬೆಂಗಳೂರು ವಿಮಾನ ಸೇವೆ ಮತ್ತೆ ಆರಂಭವಾಗುತ್ತಿದೆ. ಈ ಸೇವೆಯ ಪುನರಾರಂಭದಿಂದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಂಚಾರ, ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಹೂಡಿಕೆ ಕ್ಷೇತ್ರಗಳಲ್ಲಿ ಹೆಚ್ಚಿನ ಅನುಕೂಲವಾಗಲಿದೆ.
ಈ ಮಹತ್ವದ ಕಾರ್ಯಕ್ಕೆ ಸಹಕರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳು, ಕೆಕೆಆರ್‌ಡಿಬಿ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು.
ಹಾಗೆಯೇ ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಸಾಗರ್ ಖಂಡ್ರೆ, ಸಚಿವ ರಹೀಂ ಖಾನ್ ಹಾಗೂ ಜಿಲ್ಲೆಯ ಎಲ್ಲಾ ಮುಖಂಡರ ಸಹಕಾರವೂ ಶ್ಲಾಘನೀಯವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮತ್ತು ಜನರ ಕನಸುಗಳನ್ನು ನನಸಾಗಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

