HomeAgricultureರಾಜ್ಯದ ರೈತರಿಗೆ ಶಾಕಿಂಗ್ ನ್ಯೂಸ್: ಈ ಬಾರಿ ಮುಂಗಾರಿಗೆ ರಸಗೊಬ್ಬರ ಕೊರತೆ

ರಾಜ್ಯದ ರೈತರಿಗೆ ಶಾಕಿಂಗ್ ನ್ಯೂಸ್: ಈ ಬಾರಿ ಮುಂಗಾರಿಗೆ ರಸಗೊಬ್ಬರ ಕೊರತೆ

ಬೆಂಗಳೂರು: ಯುದ್ಧದ ಪರಿಣಾಮ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.

ಪ್ರೆಸ್ ಕ್ಲಬ್ ಸಂವಾದದಲ್ಲಿ ಅವರು ಮಾತನಾಡಿ, ಯುದ್ಧದ ಪರಿಣಾಮ ರಸಗೊಬ್ಬರ ಉತ್ಪಾದನೆಗೆ ಅಗತ್ಯವಿರುವ ಕಚ್ಚಾ ವಸ್ತುಗಳು ಮತ್ತು ರಸಗೊಬ್ಬರ ಆಮದು ಮೇಲೆ ಪರಿಣಾಮ ಉಂಟಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬೇಡಿಕೆಯಷ್ಟು ಪ್ರಮಾಣದಲ್ಲಿ ರಸಗೊಬ್ಬರ ಪೂರೈಸದ ಕಾರಣ ಮುಂಗಾರು ಹಂಗಾಮಿಗೆ ಕೊರತೆಯಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡಿಲ್ಲ. ಕಡಿಮೆ ಪ್ರಮಾಣದಲ್ಲಿ ರಸಗೊಬ್ಬರ ಬಳಕೆಗೆ ಸೂಚನೆ ನೀಡಿದೆ. ಹೀಗಾಗಿ ಕೊರತೆ ಉಂಟಾಗಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ ನಿಂದ ಇದುವರೆಗೆ 8.57 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು 4.31 ಲಕ್ಷ ಮೆ. ಟನ್  ಪೂರೈಕೆಯಾಗಿದೆ. ಏಪ್ರಿಲ್ ನಲ್ಲಿ 4.02 ಲಕ್ಷ ಮೆಟ್ರಿಕ್ ಟನ್ ಬೇಡಿಕೆಗೆ ಬದಲಾಗಿ 2.54 ಲಕ್ಷ ಮೆಟ್ರಿಕ್ ಟನ್ ಪೂರೈಕೆಯಾಗಿದೆ. ಮೇ ತಿಂಗಳಲ್ಲಿ ಇದುವರೆಗೂ 4.54 ಲಕ್ಷ ಮೆ.ಟನ್ ಬೇಡಿಕೆಗೆ 1.77 ಲಕ್ಷ ಮೆಟ್ರಿಕ್ ಟನ್ ಮಾತ್ರ ರಸಗೊಬ್ಬರ ಸರಬರಾಜು ಆಗಿದೆ. ಪರ್ಯಾಯವಾಗಿ ದ್ರವರೂಪದ ನ್ಯಾನೋ ಯೂರಿಯಾ, ನ್ಯಾನೋ ಡಿಎಪಿ ಬಳಕೆ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular