HomeLatest Newsಸಾರ್ವಜನಿಕರೇ ಗಮನಿಸಿ ; ನಾಳೆ ದೇಶಾದ್ಯಂತ 'ಮೆಡಿಕಲ್ ಶಾಪ್' ಗಳು ಬಂದ್ |Medical Shop Closed

ಸಾರ್ವಜನಿಕರೇ ಗಮನಿಸಿ ; ನಾಳೆ ದೇಶಾದ್ಯಂತ ‘ಮೆಡಿಕಲ್ ಶಾಪ್’ ಗಳು ಬಂದ್ |Medical Shop Closed

ಔಷಧಗಳ ಆನ್‌ಲೈನ್ ಮಾರಾಟ (Online Pharmacy) ಮತ್ತು ಕಾರ್ಪೊರೇಟ್ ಕಂಪನಿಗಳ ಅನಾರೋಗ್ಯಕರ ಸ್ಪರ್ಧೆಯನ್ನು ವಿರೋಧಿಸಿ ಮೇ 20 ರಂದು ದೇಶಾದ್ಯಂತ 24 ಗಂಟೆಗಳ ಕಾಲ ಮೆಡಿಕಲ್ ಅಂಗಡಿಗಳು ಸಂಪೂರ್ಣ ಬಂದ್ ಆಗಲಿವೆ.

ಹೌದು. ‘ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್’ (AIOCD) ಕರೆ ನೀಡಿರುವ ಈ ಮುಷ್ಕರಕ್ಕೆ ‘ಕರ್ನಾಟಕ ರಾಜ್ಯ ಕೆಮಿಸ್ಟ್ಸ್ ಮತ್ತು ಡ್ರಗಿಸ್ಟ್ಸ್ ಅಸೋಸಿಯೇಶನ್’ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಬೆಂಗಳೂರಿನ 26,000ಕ್ಕೂ ಹೆಚ್ಚು ಶಾಪ್‌ಗಳು ಸೇರಿದಂತೆ ರಾಜ್ಯಾದ್ಯಂತ ಔಷಧ ವ್ಯಾಪಾರ ಸ್ಥಗಿತಗೊಳ್ಳಲಿದೆ. ಇ-ಪೋರ್ಟಲ್‌ಗಳಲ್ಲಿ ನಕಲಿ ಪ್ರಿಸ್ಕ್ರಿಪ್ಷನ್ ಬಳಸಿ ನಿಯಮಬಾಹಿರವಾಗಿ ಔಷಧ ವಿತರಿಸಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿರುವ ವ್ಯಾಪಾರಸ್ಥರು, ಸಾರ್ವಜನಿಕರು ತಮಗೆ ಅಗತ್ಯವಿರುವ ತುರ್ತು ಮತ್ತು ಜೀವ ರಕ್ಷಕ ಔಷಧಗಳನ್ನು ಮುಂಚಿತವಾಗಿಯೇ ಖರೀದಿಸಿಟ್ಟುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಔಷಧಗಳ ಆನ್‌ಲೈನ್ ಮಾರಾಟ ಮತ್ತು ಕಾರ್ಪೊರೇಟ್ ಕಂಪನಿಗಳ ಅನಾರೋಗ್ಯಕರ ಸ್ಪರ್ಧೆಯನ್ನು ವಿರೋಧಿಸಿ ಮೇ 20 ರಂದು ದೇಶಾದ್ಯಂತ 24 ಗಂಟೆಗಳ ಕಾಲ ಮೆಡಿಕಲ್ ಅಂಗಡಿಗಳು ಸಂಪೂರ್ಣ ಬಂದ್ ಆಗಲಿವೆ.’ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್’ (AIOCD) ಮತ್ತು ‘ಕರ್ನಾಟಕ ರಾಜ್ಯ ಕೆಮಿಸ್ಟ್ಸ್ ಮತ್ತು ಡ್ರಗಿಸ್ಟ್ಸ್ ಅಸೋಸಿಯೇಶನ್’ (KCDA) ಈ ಮುಷ್ಕರಕ್ಕೆ ಕರೆ ನೀಡಿವೆ.ಬೆಂಗಳೂರಿನ 26,000ಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಸೇರಿದಂತೆ ರಾಜ್ಯದ ಹಾಗೂ ದೇಶದ ಲಕ್ಷಾಂತರ ಔಷಧ ಅಂಗಡಿಗಳು ಬಂದ್‌ಗೆ ಬೆಂಬಲ ಸೂಚಿಸಿವೆ.ಸಾರ್ವಜನಿಕರು ತಮಗೆ ಅಗತ್ಯವಿರುವ ತುರ್ತು ಔಷಧಗಳನ್ನು ಮುಂಚಿತವಾಗಿಯೇ ಖರೀದಿಸಿ ಇಟ್ಟುಕೊಳ್ಳುವಂತೆ ಔಷಧ ವ್ಯಾಪಾರಸ್ಥರ ಸಂಘ ಮನವಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಭಟನೆಗೆ ಮುಖ್ಯ ಕಾರಣಗಳೇನು?

  1. ಆನ್‌ಲೈನ್ ಮಾರಾಟದ ಹೊಡೆತ: ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಕೇಂದ್ರ ಸರ್ಕಾರವು ಆನ್‌ಲೈನ್ ವೇದಿಕೆಗಳಲ್ಲಿ ಔಷಧ ಮಾರಾಟಕ್ಕೆ ಅನುಮತಿ ನೀಡಿತ್ತು. ಪ್ರಸ್ತುತ ಆನ್‌ಲೈನ್ ಫಾರ್ಮಸಿಗಳು ಭಾರಿ ರಿಯಾಯಿತಿ (ಡಿಸ್ಕೌಂಟ್) ದರದಲ್ಲಿ ಮನೆಗೇ ತಲುಪಿಸುತ್ತಿರುವುದರಿಂದ ಸಾಂಪ್ರದಾಯಿಕ ಮತ್ತು ಸ್ಥಳೀಯ ಔಷಧ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
  2. ನಕಲಿ ಪ್ರಿಸ್ಕ್ರಿಪ್ಷನ್ ಆತಂಕ: ಇ-ಪೋರ್ಟಲ್‌ಗಳಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಸಿ ನಕಲಿ ವೈದ್ಯರ ಪ್ರಿಸ್ಕ್ರಿಪ್ಷನ್‌ಗಳನ್ನು ಸೃಷ್ಟಿಸಿ ಆ್ಯಂಟಿಬಯಾಟಿಕ್ ಹಾಗೂ ವ್ಯಸನಕ್ಕೆ ಕಾರಣವಾಗುವ ಔಷಧಗಳನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದು ಯುವ ಪೀಳಿಗೆಯನ್ನು ದುಶ್ಚಟಗಳಿಗೆ ತಳ್ಳುವ ಅಪಾಯ ಹೊಂದಿದೆ.
  3. ನಿಯಮಗಳ ಉಲ್ಲಂಘನೆ: ಔಷಧಗಳು ಸಾಮಾನ್ಯ ಗ್ರಾಹಕ ವಸ್ತುಗಳಲ್ಲ. ಅವುಗಳನ್ನು ಅರ್ಹ ಫಾರ್ಮಾಸಿಸ್ಟ್‌ಗಳ ಸಮ್ಮುಖದಲ್ಲಿ ಸುರಕ್ಷತಾ ನಿಯಮಗಳೊಂದಿಗೆ ನೀಡಬೇಕು. ಆದರೆ ಆನ್‌ಲೈನ್‌ನಲ್ಲಿ ಇಂತಹ ಯಾವುದೇ ಕಟ್ಟುನಿಟ್ಟಿನ ನಿಯಮಗಳು ಪಾಲನೆಯಾಗುತ್ತಿಲ್ಲ.
  4. ಮಾಹಿತಿ ಕೊರತೆ: ಸ್ಥಳೀಯ ಅಂಗಡಿಗಳು ಯಾರಿಗೆ ಎಷ್ಟು ಔಷಧ ಮಾರಾಟ ಮಾಡಿದ್ದೇವೆ ಎಂಬ ಮಾಹಿತಿಯನ್ನು ಸರ್ಕಾರಕ್ಕೆ ನೀಡುತ್ತವೆ, ಆದರೆ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಇಂತಹ ಯಾವುದೇ ನಿಖರ ಮಾಹಿತಿಯನ್ನು ಹಂಚಿಕೊಳ್ಳುತ್ತಿಲ್ಲ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿಎಸ್‌ಆರ್ 817 ಹಾಗೂ ಕೋವಿಡ್ ಅವಧಿಯಲ್ಲಿ ತರಲಾಗಿದ್ದ ನಿಯಮಗಳನ್ನು ತಕ್ಷಣ ಹಿಂಪಡೆಯಬೇಕು. ಕಾರ್ಪೊರೇಟ್ ಕಂಪನಿಗಳ ತೀವ್ರ ರಿಯಾಯಿತಿ ತಡೆಗಟ್ಟಲು ‘ಲೆವೆಲ್ ಪ್ಲೇಯಿಂಗ್ ಫೀಲ್ಡ್’ ನೀತಿ ಜಾರಿಗೊಳಿಸಬೇಕು. ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ವ್ಯಾಪಾರಿಗಳು ಎಚ್ಚರಿಸಿದ್ದಾರೆ. ಮೇ 20 ರಂದು ಔಷಧ ಅಂಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular