ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ.
ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ಲಕ್ಷ್ಮವ್ವ ಹರಣಸಿಕಾರಿ(15), ಮುತ್ತವ್ವ ಹರಣಸಿಕಾರಿ(8) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಯರೇಹಂಚಿನಾಳ ಗ್ರಾಮದಿಂದ ಗದಗಕ್ಕೆ ತೆರಳುವ ರಸ್ತೆ ಪಕ್ಕದ ಕೃಷಿ ಹೊಂಡಕ್ಕೆ ಬಟ್ಟೆ ತೊಳೆಯಲು ತೆರಳಿದ್ದರು. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಸಾವಿನಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಕುಟುಂಬದವರಿಗೆ ಪರಿಹಾರ ನೀಡಬೇಕೆಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

