ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಅನುದಾನ ಮಂಜೂರು ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಮುದಾಯದ ಪಲಾಪೇಕ್ಷಿಗಳು ಅರ್ಜಿಯನ್ನು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಅಥವಾ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇವರ ಕಚೇರಿಗೆ ಇದೇ ಮೇ 30 ರೊಳಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ನಿವೇಶನದ ಹಕ್ಕುಪತ್ರ, ಆರ್.ಟಿ.ಸಿ, ಅರ್ಜಿದಾರರು ಹಿಂದೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಅಥವಾ ಇತರೆ ವಸತಿ ಯೋಜನೆಗಳಡಿ ಸೌಕರ್ಯ ಪಡೆಯದಿರುವ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯತ್/ ನಗರ ಸ್ಥಳೀಯ ಸಂಸ್ಥೆಯಿಂದ ದೃಢೀಕರಣ ಪತ್ರ. ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಚಿತ್ರಕೃಪೆ: ಎಐ

