HomeLatest NewsBIG NEWS: ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೋಲೇಟ್ ನೀಡಿದ ಪ್ರಧಾನಿ ಮೋದಿ ಟೀಕಿಸಿದ ರಾಹುಲ್...

BIG NEWS: ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೋಲೇಟ್ ನೀಡಿದ ಪ್ರಧಾನಿ ಮೋದಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: ಐದು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಐದನೇ ಹಾಗೂ ಕೊನೇ ಹಂತದ ಭೇಟಿಗಾಗಿ ಇಟಲಿಗೆ ಭೇಟಿ ನೀಡಿದ್ದು, ಈ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಪ್ರಧಾನಿ ಮೋದಿ ಮೆಲೋಡಿ ಚಾಕೋಲೆಟ್ ಗಿಫ್ಟ್ ಕೊಟ್ಟಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸ್ವತಃ ಮೆಲೋನಿ ಹಂಚಿಕೊಂಡಿರುವ ವಿಡಿಯೋ ಭಾರಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಇಟಲಿ ಪ್ರಧಾನಿ ಮೆಲೋನಿಗೆ ಪ್ರಧಾನಿ ಮೋದಿ ಚಾಕೋಲೆಟ್ ಉಡುಗೊರೆ ಕೊಟ್ಟ ವಿಚಾರ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಭಾರತದಲ್ಲಿ ಆರ್ಥಿಕ ಬಿಕ್ಕಟ್ಟು, ಇಂಧನ, ರಸಗೊಬ್ಬರ ಬಿಕ್ಕಟ್ಟು ಎದುರಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸದಲ್ಲಿದ್ದು, ರೋಮ್ ನಲ್ಲಿ ಹಲವೆಡೆ ಸುತ್ತಾಟ ನಡೆಸುತ್ತಿದ್ದಾರೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಮೆಲೋಡಿ ಚಾಕೋಲೆಟ್ ಗಿಫ್ಟ್ ನೀಡಿ ನಗುತ್ತಾ ರೀಲ್ಸ್ ಮಾಡುತ್ತಿದ್ದಾರೆ ಎಂದು ವಿಪಕ್ಷಗಳು ವಾಗ್ದಾಳಿ ನಡೆಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಮೆಲೋನಿ ಅವರಿಗೆ ಮೆಲೋಡಿ ಚಾಕೋಲೆಟ್ ಗಿಫ್ಟ್ ಕೊಟ್ಟ ವಿಚಾರವಾಗಿ ಪ್ರಸ್ತಾಪಿಸಿರುವ ರಾಹುಲ್ ಗಾಂಧಿ ಮೋದಿ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಆರ್ಥಿಕ ಬಿರುಗಾಳಿ ನಮ್ಮ ತಲೆಯ ಮೇಲೆ ಬೀಸುತ್ತಿದೆ, ಆದರೆ ನಮ್ಮ ಪ್ರಧಾನಿ ಇಟಲಿಯಲ್ಲಿದ್ದು, ಸಿಹಿತಿಂಡಿಗಳನ್ನು ಹಂಚುತ್ತಿದ್ದಾರೆ.

ರೈತರು, ಯುವಕರು, ಮಹಿಳೆಯರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳು – ಎಲ್ಲರೂ ಸಂಕಷ್ಟದಲ್ಲಿದ್ದು, ಕಣ್ಣೀರಿಡುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ನಗುತ್ತಿದ್ದಾರೆ ಮತ್ತು ಚಲನಚಿತ್ರಗಳನ್ನು ನೋಡುತ್ತಿದ್ದಾರೆ. ಇತ್ತ ಬಿಜೆಪಿ ಕಾರ್ಯಕರ್ತರು ಚಪ್ಪಾಳೆ ತಟ್ಟುತ್ತಿದ್ದಾರೆ. ಇದು ನಾಯಕತ್ವವಲ್ಲ; ಇದು ಒಂದು ಪ್ರಹಸನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular