HomeJobsಎಸ್ಎಸ್ಎಲ್ಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ: ಮೇ 22 ರಂದು ನೇರ ಸಂದರ್ಶನ

ಎಸ್ಎಸ್ಎಲ್ಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ: ಮೇ 22 ರಂದು ನೇರ ಸಂದರ್ಶನ

ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ  ಮೇ, 22 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ “ನೇರ ಸಂದರ್ಶನ” ಆಯೋಜಿಸಲಾಗಿದೆ.

ನೇರ ಸಂದರ್ಶನದಲ್ಲಿ ಜೆಕೆ ಟೈರ್ಸ್ ಮೈಸೂರು ಅವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ನೇರ ಸಂದರ್ಶನದಲ್ಲಿ ‘ಜೆಕೆ ಟೈಯರ್ಸ್ ಮೈಸೂರು’ಇವರು ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೇರವು ಪಡೆಯಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಅವರನ್ನು ಸಂಪರ್ಕಿಸಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular