ವಿಜಯಪುರ: ಮಳೆಯಿಂದ ತೇವಗೊಂಡಿದ್ದ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂಡಿ ಪಟ್ಟಣದಲ್ಲಿ ಮುಂಜಾನೆ ನಡೆದಿದೆ.
ಗೌರೀಶ್ವರ ದೇವಸ್ಥಾನ ಬಳಿಯ ನಿವಾಸಿ ಮಹಾದೇವಿ ವಾರದ(55) ಮೃತಪಟ್ಟವರು. ಮನೆ ಸುರಿದ ಭಾರೀ ಮಳೆಗೆ ತೇವಗೊಂಡಿದ್ದ ಮನೆಯ ಮೇಲ್ಛಾವಣಿ ಕುಸಿದು ದುರಂತ ಸಂಭವಿಸಿದೆ.
ರಾತ್ರಿ ಮನೆಯಲ್ಲಿ ಮಲಗಿದಾಗ ಮೇಲ್ಛಾವಣಿ ಕುಸಿದು ಮಹಾದೇವಿ ಸಾವನ್ನಪ್ಪಿದ್ದಾರೆ. ಮನೆಯ ಹೊರಗೆ ಮಲಗಿದ್ದ ವತಿ ಶಿವಾನಂದ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನಿಡಗುಂದಿ ಪೊಲೀಸರು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಾದೇವಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ನಿಡಗುಂಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

