HomeLatest NewsJOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೇ ಇಲಾಖೆಯಲ್ಲಿ 6,565 ಟೆಕ್ನಿಷಿಯನ್...

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೇ ಇಲಾಖೆಯಲ್ಲಿ 6,565 ಟೆಕ್ನಿಷಿಯನ್ ಹುದ್ದೆಗಳ ಭರ್ತಿ |Railway Recruitment 2026

ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶಾದ್ಯಂತ ಬೃಹತ್ ಪ್ರಮಾಣದ ಹುದ್ದೆಗಳನ್ನು ಭರ್ತಿ ಮಾಡಲು ಸಿದ್ಧತೆ ನಡೆಸಿದೆ. ಇದರ ಭಾಗವಾಗಿ, ಒಟ್ಟು 6,565 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗಾಗಿ ರೈಲ್ವೆ ಇಲಾಖೆಯು ಪ್ರಾಥಮಿಕ ಮಾಹಿತಿಯುಳ್ಳ ಕಿರು ಅಧಿಸೂಚನೆಯನ್ನು (Short Notice) ಬಿಡುಗಡೆ ಮಾಡಿದೆ.

ಈ ಹುದ್ದೆಗಳಿಗೆ ಸಂಬಂಧಿಸಿದ ಪೂರ್ಣ ಪ್ರಮಾಣದ ಅಧಿಕೃತ ಅಧಿಸೂಚನೆಯು ಜೂನ್ 30 ರಂದು ಬಿಡುಗಡೆಯಾಗಲಿದೆ. ಅರ್ಹ ಅಭ್ಯರ್ಥಿಗಳು ಅದೇ ದಿನದಿಂದ ಜುಲೈ 29 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳಲ್ಲಿ 323 ಗ್ರೇಡ್-1 ಸಿಗ್ನಲ್ ಹುದ್ದೆಗಳು ಮತ್ತು 6,242 ಟೆಕ್ನಿಷಿಯನ್ ಗ್ರೇಡ್-3 ಹುದ್ದೆಗಳಿವೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ಐಟಿಐ (ITI), ಬಿಎಸ್ಸಿ (BSc), ಅಥವಾ ಮಾನ್ಯತೆ ಪಡೆದ ಬೋರ್ಡ್/ಯೂನಿವರ್ಸಿಟಿಯಿಂದ ಇಂಜಿನಿಯರಿಂಗ್ ಡಿಪ್ಲೊಮಾ/ಡಿಗ್ರಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಯೋಮಿತಿಯ ವಿಷಯಕ್ಕೆ ಬಂದರೆ, ಗ್ರೇಡ್-1 ಹುದ್ದೆಗಳಿಗೆ 18 ರಿಂದ 33 ವರ್ಷಗಳು ಮತ್ತು ಗ್ರೇಡ್-3 ಹುದ್ದೆಗಳಿಗೆ 18 ರಿಂದ 30 ವರ್ಷಗಳ ಒಳಗಿರಬೇಕು. ಸರ್ಕಾರದ ನಿಯಮಗಳ ಪ್ರಕಾರ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳು ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಮೂರು ಹಂತಗಳಲ್ಲಿ ನಡೆಯಲಿದೆ. ಮೊದಲಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದವರಿಗೆ ಮುಂದಿನ ಹಂತದಲ್ಲಿ ದಾಖಲೆಗಳ ಪರಿಶೀಲನೆ (Document Verification) ಮತ್ತು ಅಂತಿಮವಾಗಿ ವೈದ್ಯಕೀಯ ಪರೀಕ್ಷೆಯನ್ನು (Medical Examination) ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನದ ವಿವರಗಳನ್ನು ನೋಡುವುದಾದರೆ, ಗ್ರೇಡ್-1 ಹುದ್ದೆಗಳಿಗೆ ತಿಂಗಳಿಗೆ ರೂ. 29,200 ಮೂಲ ವೇತನದೊಂದಿಗೆ ಇತರ ಭತ್ಯೆಗಳು ಸಿಗಲಿವೆ. ಹಾಗೆಯೇ, ಗ್ರೇಡ್-3 ಹುದ್ದೆಗಳಿಗೆ ರೂ. 19,900 ಮೂಲ ವೇತನದೊಂದಿಗೆ ಆಕರ್ಷಕ ವೇತನ ಸೌಲಭ್ಯಗಳು ಸಿಗಲಿವೆ. ಆಸಕ್ತ ಅಭ್ಯರ್ಥಿಗಳು ಜೂನ್ 30 ರಂದು ಪೂರ್ಣ ಅಧಿಸೂಚನೆ ಬಿಡುಗಡೆಯಾದ ನಂತರ, ಅಧಿಕೃತ ವೆಬ್‌ಸೈಟ್ ಮೂಲಕ ಪಠ್ಯಕ್ರಮ, ಪರೀಕ್ಷಾ ವಿಧಾನ ಮುಂತಾದ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular