HomeKarnatakaBIG NEWS: ರಾಜ್ಯದಲ್ಲಿ ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಬಗ್ಗೆ ಚರ್ಚೆಗೆ ಮೇ 24...

BIG NEWS: ರಾಜ್ಯದಲ್ಲಿ ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಬಗ್ಗೆ ಚರ್ಚೆಗೆ ಮೇ 24 ರಂದು ಶಾಸಕಾಂಗ ಸಭೆ ಕರೆದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ವಿಚಾರವಕ್ಕೆ ಸಂಬಂಧಿಸಿದಂತೆ ಮೇ 24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಖಾಸಗಿ ರೆಸಾರ್ಟ್ ನಲ್ಲಿ ಶಾಸಕಾಂಗ ಪಕ್ಷದ ಸಭೆ ನಿಗದಿ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆಗೆ ಮಾಜಿ ಶಾಸಕರಿಗೂ ಆಹ್ವಾನ ನೀಡಲಾಗಿದೆ. ಎಸ್ಐಆರ್ ಬಗ್ಗೆ ರಾಜ್ಯ ಕಾಂಗ್ರೆಸ್ ಭಾರಿ ಆತಂಕದಲ್ಲಿದೆ.

ಇಂದಿನ ಸಂಪುಟ ಸಭೆಯಲ್ಲಿಯೂ ಈ ಕುರಿತಾಗಿ ಚರ್ಚೆ ನಡೆದಿದೆ. ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್, ರಾಜ್ಯದಲ್ಲಿ ಪ್ರಾರಂಭವಾಗಲಿರುವ ಎಸ್ಐಆರ್ ಕುರಿತಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬಂಗಾಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಗಂಭೀರ ಆಕ್ಷೇಪ ವ್ಯಕ್ತವಾಗಿದೆ. ತಮಿಳುನಾಡಿನ ಹಲವು ಆಕ್ಷೇಪಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ನಾಗರಿಕ ಮತದಾನದ ಹಕ್ಕು ಕಳೆದುಕೊಳ್ಳಬಾರದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನವಶ್ಯಕ ಉದ್ದೇಶಪೂರ್ವಕವಾಗಿ ಮತದಾನ ಹಕ್ಕು ಕಳೆದುಕೊಳ್ಳುವಂತಹ, ದಮನ ಮಾಡುವ ಯಾವುದೇ ಪ್ರಕ್ರಿಯೆ ನಡೆದರೆ ಸಹಿಸುವುದಿಲ್ಲ. ಅವುಗಳಿಂದ ನಾಗರಿಕನಿಗೆ ಮತದಾನದ ಹಕ್ಕು ಉಳಿಸಿಕೊಳ್ಳುವ ಸರ್ವ ಪ್ರಯತ್ನ ಮಾಡಬೇಕು ಎಂಬ ಚಿಂತನೆ ಮಾಡಿದ್ದೇವೆ. 10-12 ಅಂಶಗಳ ಮೇಲೆ ಸುದೀರ್ಘ ಚರ್ಚೆ ನಡೆಸಿದ್ದೇವೆ. ಚರ್ಚೆ ಅಪೂರ್ಣವಾಗಿದೆ. ಇನ್ನೂ ಚರ್ಚೆ ಮಾಡಬೇಕಿದೆ. ಸಿಎಂ ಹಾಗೂ ನಾಯಕರ ಜೊತೆಗೆ ಚರ್ಚೆ ಮಾಡುತ್ತೇವೆ. 3-4 ದಿನದಲ್ಲಿ ಅಂತಿಮ ನಿರ್ಣಯ ತೆಗೆದುಕೊಳ್ಳುತ್ತೇವೆ. ಗಂಭೀರವಾದ ಹೆಜ್ಜೆ ಇಡುವುದಕ್ಕೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular