HomeKarnatakaಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಬೇಲಿ ಹಾಕಲು ಸಚಿವ ಈಶ್ವರ್ ಖಂಡ್ರೆ ಸೂಚನೆ

ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಬೇಲಿ ಹಾಕಲು ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಅರಣ್ಯ ಭೂಮಿ ಒತ್ತುವರಿಯನ್ನು ಕೂಡಲೇ ತೆರುವುಗೊಳಿಸಿ ಅನುದಾನ ಬಳಸಿ ಬೇಲಿ ಹಾಕುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಗುರುವಾರ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಒತ್ತುವರಿ ತೆರವುಗೊಳಿಸಿ ಬೇಲಿ ಹಾಕಲು ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಹಾಸನ ನಗರಕ್ಕೆ ಹೊಂದಿಕೊಂಡ ಮಡೆನೂರು ಅರಣ್ಯ ಪ್ರದೇಶ ಅರಣ್ಯ ಇಲಾಖೆ ಹೆಸರಲ್ಲಿ ಇದ್ದರೂ ಅಲ್ಲಿ ಅರಣ್ಯ ಹೆಚ್ಚಿಸಲು ಮುಂದಾಗಿಲ್ಲ. ಹೀಗಾಗಿ ಒತ್ತುವರಿ ಹೆಚ್ಚಾಗುತ್ತಿದೆ. ಇದೇ ರೀತಿ ನಗರ, ಪಟ್ಟಣ ಪ್ರದೇಶ ಸಮೀಪದ ಅರಣ್ಯ ಭೂಮಿಗಳನ್ನು ಗುರುತಿಸಿ ಅಲ್ಲಿ ಒತ್ತುವರಿಯಾಗಿದ್ದರೆ ತೆರವುಗೊಳಿಸಬೇಕು. ಬಳಿಕ ಅನುದಾನ ಬಳಸಿ ಬೇಲಿ ಹಾಕಬೇಕು. ಸ್ಥಳೀಯ ಪ್ರಭೇದದ ಸಸಿಗಳ ನೆಡುತೋಪುಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular