HomeKarnatakaಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರೇಷನ್ ಕಾರ್ಡ್ ತಿದ್ದುಪಡಿ ಅವಧಿ ವಿಸ್ತರಣೆ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರೇಷನ್ ಕಾರ್ಡ್ ತಿದ್ದುಪಡಿ ಅವಧಿ ವಿಸ್ತರಣೆ

ಹೊಸಪೇಟೆ: ವಿಜಯನಗರ ಜಿಲ್ಲೆಯ ಪಡಿತರ ಚೀಟಿದಾರರಿಗೆ ಪಡಿತರ ಚೀಟಿಯಲ್ಲಿನ ತಿದ್ದುಪಡಿ ಸೇವೆಗಳ ಅವಧಿಯನ್ನು ಮೇ 8 ರಿಂದ 2027ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.

ಸಾರ್ವಜನಿಕರು ಸಮೀಪದ ಗ್ರಾಮ ಒನ್  ಹಾಗೂ ಕರ್ನಾಟಕ ಒನ್ ಕೇಂದ್ರಗಳ ಮೂಲಕ ಈ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಪಡಿತರ ಚೀಟಿ ತಿದ್ದುಪಡಿ ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕುವುದು, ವಿಳಾಸ ಅಥವಾ ನ್ಯಾಯಬೆಲೆ ಅಂಗಡಿ ಬದಲಾವಣೆ, ಇ-ಕೆವೈಸಿ ಪ್ರಕ್ರಿಯೆಗಳಿಗೆ 25 ರೂ. ಶುಲ್ಕ ನಿಗದಿಪಡಿಸಲಾಗಿದೆ.

ಸಾರ್ವಜನಿಕರು ಯಾವುದೇ ಕಾರಣಕ್ಕೂ ಮಧ್ಯವರ್ತಿ ಅಥವಾ ಮೂರನೇ ವ್ಯಕ್ತಿಗಳ ಸಂಪರ್ಕಿಸಿ ಆಮಿಷಕ್ಕೆ ಒಳಗಾಗಬಾರದು. ಸರ್ಕಾರ ನಿಗದಿಪಡಿಸಿದ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ನೀಡಬಾರದು. ಅರ್ಜಿ ವಿಲೇವಾರಿ ಮತ್ತು ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಆಯಾ ತಾಲೂಕು ಕಚೇರಿಯ ಆಹಾರ ಶಾಖೆಯನ್ನು ಸಂಪರ್ಕಿಸಬಹುದು ಎಂದು ಆಹಾರ ಇಲಾಖೆ ಉಪ ನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular