HomeLatest NewsBIG NEWS: ಕಾವೇರಿ ನದಿಯಲ್ಲಿ ಈಜಲು ಹೋಗಿ ದುರಂತ: ಇಬ್ಬರು ಯುವಕರು ಜಲಸಮಾಧಿ

BIG NEWS: ಕಾವೇರಿ ನದಿಯಲ್ಲಿ ಈಜಲು ಹೋಗಿ ದುರಂತ: ಇಬ್ಬರು ಯುವಕರು ಜಲಸಮಾಧಿ

ಮಂಡ್ಯ: ಪ್ರವಾಸಿ ತಾಣಕ್ಕೆಂದು ಬಂದು ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.

ಮೊಹನ್ ಕುಮಾರ್(21) ಹಾಗೂ ರವಿಚಂದ್ರ (21) ಸಾವನಪ್ಪಿರುವ ಯುವಕರು.ಮೋಹನ್ ಕುಮಾರ್ ಮೈಸೂರು ನಗರದವರು. ರವಿಚಂದ್ರ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ನಿವಾಸಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದರು, ಮತ್ತೊಬ್ಬ ಸ್ನೇಹಿತ ವಿಕಾಸ್ ಜೊತೆಗೂಡಿ ಮೂವರು ಬಲಮುರಿ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಕಾವೇರಿ ನದಿಯಲ್ಲಿ ಈಜಲು ಇಳಿದು ದುರಂತಕ್ಕೀಡಾಗಿದ್ದಾರೆ.

ಕೆ.ಆರ್ ಎಸ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಇಬ್ಬರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು, ಶವವನ್ನು ಮೈಸೂರು ಕೆ.ಆರ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular