ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ ಚರ್ಚೆಗೆ ಬಂದ ಬೆನ್ನಲ್ಲೇ ಕೆಲ ಸಚಿವರು, ಶಾಸಕರು ದೆಹಲಿಗೆ ದೌಡಾಯಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೆ ಕಾಯುತ್ತಿದ್ದಾರೆ. ಇನ್ನೊಂದೆಡೆ ಶಾಸಕರ ಮತ್ತೊಂದು ಟೀಂ ದೆಹಲಿಗೆ ತೆರಳಲು ಸಜ್ಜಾಗಿದೆ.
ಶಿಮೊಗ್ಗದಲ್ಲಿ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಈಗ ನಮಗೆ ಅವಕಾಶವನ್ನು ಕೊಡಲಿ. ಈಗಿರುವ ಸಚಿವರನ್ನು ಬದಲಾವಣೆ ಮಾಡಿ ಹೊಸಬರಿಗೆ ಅವಕಾಶಗಳನ್ನು ಕೊಡಲಿ. ಮೂರು ವರ್ಷ ಅವರು ಮಂತ್ರಿ ಸ್ಥಾನಗಳನ್ನು ಅನುಭವಿಸಿದ್ದಾಯ್ತು. ಈಗ ಸಾಕು, ಈಗಗಲಾದರೂ ನಮಗೆ ಅವಕಾಶ ಮಾಡಿಕೊಡಲಿ. ಅವರೇ ಸಚಿವರಾಗಿ ಮುಂದುವರೆಯಬೇಕು ಎಂಬ ನಿಯಮವೇನೂ ಇಲ್ಲ ಎಂದು ಹೇಳಿದರು.
ಮೇ ೨೭ರಂದು ೩೫ ಶಾಸಕರು ದೆಹಲಿಗೆ ಹೋಗುತ್ತಿದ್ದೇವೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ನಮ್ಮ ಹಕ್ಕು ಮಂಡಿಸುತ್ತೇವೆ. ನಮಗೆ ಅವಕಾಶ ಮಾಡಿಕೊಡಿ ಎಂದು ಕೇಳುತ್ತೇವೆ. ಈ ಬಾರಿ ಕಳೆದ ಬಾರಿಗಿಂತ ಹೆಚ್ಚು ಶಾಸಕರು ದೆಹಲಿಗೆ ಹೋಗುತ್ತಿದ್ದೇವೆ ಎಂದರು.
ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು, ಈ ಬಗ್ಗೆ ನೀವು ಅವರನ್ನೇ ಕೇಳಬೇಕು. ನಾವು ಸಚಿವ ಸ್ಥಾನದ ಆಕಾಂಕ್ಷಿಗಳು ಹಾಗಾಗಿ ಅದನ್ನು ಮಾತ್ರ ಮಾತನಾಡುತ್ತೇವೆ. ಸಿಎಂ ಬದಲಾವಣೆ ವಿಚಾರವಾಗಿ ನಾವೇನೂ ಹೇಳುವುದಿಲ್ಲ ಎಂದರು.

