ಕೋಲಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಬಿರುಗಾಳಿ, ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅನಾಹುತಗಳು ಸಂಭವಿಸಿವೆ. ಬಿರುಗಾಳಿ ಮಳೆಗೆ ಮಮ್ನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಸಿಮೆಂಟ್ ಇಟ್ಟಿಗೆ ಬಿದ್ದು ರೈತ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹಾಸಂಡಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಬಿರುಗಾಳಿ, ನಾರಾಯಣಪ್ಪ ಮೃತ ರೈತ. ಕುರಿ ಮೇಯಿಸುತ್ತಿದ್ದ ವೇಳೆ ಭಾರಿ ಮಳೆಮ್ ಬಿರುಗಾಳಿ ಆರಂಭವಾಗಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಮನೆಯೊಂದರ ಬಳಿ ಆಶ್ರಯ ಪಡೆದಿದ್ದರು.
ಗಾಳಿ ರಭಸಕ್ಕೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಸಿಮೆಂಟ್ ಇಟ್ಟಿಗೆ ರೈತನ ಮೇಲೆ ಬಿದ್ದಿದೆ. ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳದಲ್ಲೇ ರೈತ ಸಾವನ್ನಪ್ಪಿದ್ದಾರೆ.

