HomeKarnatakaGOOD NEWS : 'ಶಿಕ್ಷಕ ಹುದ್ದೆ' ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ; 51,000 ಅತಿಥಿ ಶಿಕ್ಷಕರ...

GOOD NEWS : ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ; 51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, 2026-27ನೇ ಶೈಕ್ಷಣಿಕ ಸಾಲಿಗಾಗಿ ಒಟ್ಟು 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅಧಿಕೃತ ಆದೇಶ ಹೊರಡಿಸಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲಾ ಪ್ರಾರಂಭದ ದಿನದಿಂದಲೇ ಬೋಧನಾ ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ಮಾಡಲು, ರಾಜ್ಯ ಸರ್ಕಾರವು ಬರೋಬ್ಬರಿ 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಹಸಿರು ನಿಶಾನೆ ತೋರಿದೆ.”

ಶಾಲೆಗಳ ವಿಂಗಡಣೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ಪ್ರಾಥಮಿಕ ಶಾಲೆಗಳು: 40,000 ಅತಿಥಿ ಶಿಕ್ಷಕರು.
    • ಪ್ರೌಢ ಶಾಲೆಗಳು: 11,000 ಅತಿಥಿ ಶಿಕ್ಷಕರು.
  • ನೇಮಕಾತಿಯ ಅವಧಿ: ಕಾಯಂ ಶಿಕ್ಷಕರು ನೇಮಕವಾಗುವವರೆಗೆ ಅಥವಾ ಸದರಿ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಮಾತ್ರ ಈ ನೇಮಕಾತಿ ಅನ್ವಯವಾಗುತ್ತದೆ.
  • ಆದೇಶದ ಹಿನ್ನೆಲೆ: ಶಾಲಾ ಪ್ರಾರಂಭದ ದಿನದಿಂದಲೇ ಬೋಧನಾ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆಯಾಗಬಾರದು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಿಕ್ಷಕರ ಕೊರತೆಯನ್ನು ನೀಗಿಸಲು ಈ ಕ್ರಮ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular