HomeUncategorizedಮ್ಯಾಟ್ರಿಮೋನಿ ವೆಬ್ ಸೈಟ್ ನಲ್ಲಿ ನಕಲಿ PhD ಡಾಕ್ಟರೇಟ್ ಪ್ರೊಫೈಲ್: ಮದುವೆಯಾಗುವುದಾಗಿ ನಂಬಿಸಿ 10ಕ್ಕೂ ಹೆಚ್ಚು...

ಮ್ಯಾಟ್ರಿಮೋನಿ ವೆಬ್ ಸೈಟ್ ನಲ್ಲಿ ನಕಲಿ PhD ಡಾಕ್ಟರೇಟ್ ಪ್ರೊಫೈಲ್: ಮದುವೆಯಾಗುವುದಾಗಿ ನಂಬಿಸಿ 10ಕ್ಕೂ ಹೆಚ್ಚು ಯುವತಿಯರಿಗೆ ವಂಚನೆ: ಯುವಕ ಹಾಗೂ ಆತನ ತಾಯಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಯುವಕನೊಬ್ಬ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ತಾನು ಪಿಎಚ್‌ಡಿ ಪದವೀಧರ, ಡಾಕ್ಟರೇಟ್ ಮಾಡಿರುವುದಾಗಿ ಸುಳ್ಳು ಪ್ರೊಫೈಲ್ ಸೃಷ್ಟಿಸಿ, ಮದುವೆಯಾಗುವುದಾಗಿ ನಂಬಿಸಿ ಹತ್ತಕ್ಕು ಹೆಚ್ಚು ಯುವತಿಯರನ್ನು ನಂಬಿಸಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಮೈಸೂರು ಮತ್ತು ಬೆಂಗಳೂರಿನ ಹತ್ತಕ್ಕೂ ಹೆಚ್ಚು ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಯುವಕ ಹಾಗೂ ಆತನ ತಾಯಿ ಎಸ್ಕೇಪ್ ಆಗಿದ್ದಾರೆ. ಪ್ರದೀಪ್ ಸೋಲೋಮನ್ ವಂಚಿಸಿರುವ ಯುವಕ. ಆತನಿಗೆ ತಾಯಿ ಕಲಾವತಿ ಕೂಡ ಸಾತ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಯಿ ಹಾಗೂ ಮಗನ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಸ್ ದಾಅಖಲಾಗುತ್ತಿದ್ದಂತೆ ತಾಯಿ-ಮಗ ಇಬ್ಬರೂ ತಲೆಮರೆಸಿಕೊಂಡಿದ್ದಾರೆ.

ಆರೋಪಿ ಪ್ರದೀಪ್ ಸೋಲೋಮನ್ ಮ್ಯಾಟ್ರಿಮೋನಿ ವೆಬ್ ಸೈಟ್‌ಗಳಲ್ಲಿ ‘ಡಾ. ಪ್ರದೀಪ್ ಸೋಲೋಮನ್’ ಹೆಸರಿನಲ್ಲಿ ಹೈ-ಫೈ ಪ್ರೊಫೈಲ್ ತೆರೆದಿದ್ದ. ಮಗನ ವಂಚನೆ ಜಾಲಕ್ಕೆ ತಾಯಿಯದ್ದೇ ಬೆಂಬಲ. ಇವರಿಬ್ಬರು ಮೈಸೂರಿನಲ್ಲಿ ದೊಡ್ಡದೊಂದು ಐಷಾರಾಮಿ ಬಂಗಲೆಯನ್ನು ಬಾಡಿಗೆಗೆ ಪಡೆದು, ತಾವು ಭಾರೀ ಶ್ರೀಮಂತರು ಎಂಬಂತೆ ಸಮಾಜದಲ್ಲಿ ಬಿಲ್ಡಪ್ ಕೊಡುತ್ತಿದ್ದರು. ಈ ಬಂಗಲೆ ಮತ್ತು ಅವರ ಲೈಫ್‌ಸ್ಟೈಲ್ ನೋಡಿ ಮದುವೆ ಸಂಬಂಧ ಬೆಳೆಸಲು ಮುಂದೆ ಬರುವ ವಧುವಿನ ಕುಟುಂಬಸ್ಥರನ್ನು ತಮ್ಮ ಬಣ್ಣ ಬಣ್ಣದ ಮಾತುಗಳಿಂದ ಬಲೆಗೆ ಬೀಳಿಸಿಕೊಳ್ಳುತ್ತಿದ್ದರು.

ತಾಯಿ-ಮಗನ ಬಣ್ಣದ ಮಾತುಗಳನ್ನು ನಂಬಿ ಯುವತಿಯರ ಪೋಷಕರು ಮದುವೆ ಸಂಬಂಧ ಬೆಳೆಸಲು ಮಾತುಕತೆವರೆಗೆ ಬಂದಾಗ ನನ್ನ ದೊಡ್ಡ ಮೊತ್ತದ ಹಣ ತಾಂತ್ರಿಕ ಕಾರಣಗಳಿಂದ ಬ್ಯಾಂಕ್‌ನಲ್ಲಿ ಸ್ಟ್ರಕ್ ಆಗಿದೆ, ಇನ್ನು ಕೆಲವೇ ದಿನಗಳಲ್ಲಿ ಹಣ ವಾಪಸ್ ಬರುತ್ತದೆ, ಸದ್ಯಕ್ಕೆ ಅರ್ಜೆಂಟ್ ಇದೆ ಎಂದು ಹೇಳಿ ಲಕ್ಷ ಲಕ್ಷ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದನು. ಪ್ರದೀಪನ ಮಾತು ನಂಬಿ ಇತ್ತೀಚೆಗೆ ಬೆಂಗಳೂರು ಮೂಲದ ಶ್ರೀಮಂತ ಕುಟುಂಬವೊಂದು ಲಕ್ಷಾಂತರ ರೂಪಾಯಿ ಹಣ ನೀಡಿ ವಂಚನೆಗೊಳಗಾಗಿದೆ. ಹಣ ಕೈ ಸೇರಿದ ಬೆನ್ನಲ್ಲೇ ಅಮ್ಮ-ಮಗ ಇಬ್ಬರೂ ನಾಪತ್ತೆಯಾಗಿದ್ದಾರೆ.

ಪ್ರದೀಪ್ ನಿಂದ ಮೋಸ ಹೋದ ಮೈಸೂರು ಮತ್ತು ಬೆಂಗಳೂರಿನ ಹಲವು ಯುವತಿಯರು ಹಾಗೂ ಅವರ ಕುಟುಂಬಸ್ಥರು ಈಗ ಮೈಸೂರಿನ ಬಂಗಲೆಯ ಮುಂದೆ ಬಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ಇತ್ತ ಆಡುಗೋಡಿ ಪೊಲೀಸರುನಾಪತ್ತೆಯಾಗಿರುವ ತಾಯಿ-ಮಗನಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಇಬ್ಬರ ಬಂಧನಕ್ಕಾಗಿ ವಿಶೇಷ ತಂಡ ರಚಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular