HomeKarnatakaBREAKING: ಕಲಬುರಗಿಯಲ್ಲಿ ಜವರಾಯನ ಅಟ್ಟಹಾಸ: ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಐವರು ಬಲಿ

BREAKING: ಕಲಬುರಗಿಯಲ್ಲಿ ಜವರಾಯನ ಅಟ್ಟಹಾಸ: ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಐವರು ಬಲಿ

ಕಲಬುರಗಿ: ಕಲಬುರಗಿಯಲ್ಲಿ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಐದು ಜನ ಬಲಿಯಾಗಿದ್ದಾರೆ. ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ಅಪಘಾತ ಸಂಭವಿಸಿದೆ.

ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕ್ರೂಸರ್ ವಾಹನದಲ್ಲಿದ್ದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.

ತೋಲಾ ಸಾಬ್ ಕಾಶ್ವಾರ್(27) ಹುಸೇನ್ ಷಾ(48), ಮೆಹಬೂಬ್ ಅಲಿ(45), ರಸೂಲ್ ಬೀ(42), ಫಾತಿಮಾ ಅಲಿ(38) ಮೃತಪಟ್ಟವರು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಟುಂಬದವರು ಕ್ರೂಸರ್ ನಲ್ಲಿ ಯಾದಗಿರಿಗೆ ಹೋಗಿ ವಾಪಸ್ ಬರುವಾಗ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜು ಗುಜ್ಜಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular