ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ನಿತಿನ್ ನಬಿನ್ ಅವರು ಇದೇ ಮೊದಲ ಬಾರಿಗೆ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರ ಅದ್ಧೂರಿ ಸ್ವಾಗತ ಮತ್ತು ರೋಡ್ ಶೋಗೆ ಹೈಕಮಾಂಡ್ ಬ್ರೇಕ್ ಹಾಕಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್, ಡೀಸೆಲ್ ಮಿತಬಳಕೆಯ ಬಗ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಏರ್ಪೋರ್ಟ್ನಿಂದ ಕೇವಲ 4 ಎಲೆಕ್ಟ್ರಿಕ್ ಕಾರುಗಳಲ್ಲಿ ಅವರು ಸಂಚರಿಸಲಿದ್ದಾರೆ.
ನಾಳೆ ಬೆಳಿಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಉಪಹಾರ ಮುಗಿಸಿ, ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ನಿತಿನ್ ನಬಿನ್ ಪಕ್ಷದ ಕಚೇರಿಗೆ ಯಾವುದೇ ಹಾರ-ತುರಾಯಿ, ಮೆರವಣಿಗೆಗಳಿಲ್ಲದೆ ಅತ್ಯಂತ ಸರಳವಾಗಿ ಭೇಟಿ ನೀಡಲಿದ್ದಾರೆ.

