HomeLatest NewsBIG NEWS: ಫರ್ನಿಚರ್ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ: 300 ಅಂಗಡಿಗಳು ಬೆಂಕಿಗಾಹುತಿ; ಅಗ್ನಿಶಾಮಕ ಸಿಬ್ಬಂದಿ...

BIG NEWS: ಫರ್ನಿಚರ್ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ: 300 ಅಂಗಡಿಗಳು ಬೆಂಕಿಗಾಹುತಿ; ಅಗ್ನಿಶಾಮಕ ಸಿಬ್ಬಂದಿ ಮೇಲೆ ಕಲ್ಲು ತೂರಾಟ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಫರ್ನಿಚರ್ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ 300 ಅಂಗಡಿಗಳು ಸುಟ್ತು ಭಸ್ಮವಾಗಿವೆ.

ನವದೆಹಲಿಯ ಶಾಸ್ತ್ರಿ ಪಾರ್ಕ್ ಪೀಠೋಪಕರಣ ಮಾರುಕಟ್ಟೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಸುಮಾರು 300 ಅಂಗಡಿಗಳು ನಾಶವಾಗಿವೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಈವರೆಗೆ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ ಈ ವೇಳೆ ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ದಳದವರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಕಿಯನ್ನು ನಂದಿಸುವಲ್ಲಿ ವಿಳಂಬ ತೋರಿದ್ದಕ್ಕೆ ಸಾರ್ವಜನಿಕರು ಆಕ್ರೋಶಗೊಂಡು ಕಲ್ಲು ತೂರಾಟ ನಡೆಸಿದ್ದು, ಇದರಿಂದ ಸ್ಥಳದಲ್ಲಿ ಮತ್ತಷ್ಟು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತಲಿನ ಅಂಗಡಿಗಳಿಗೂ ವ್ಯಾಪಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ. ಬೆಂಕಿ ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular