HomeLatest NewsBREAKING : ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ : ಕನಿಷ್ಠ 82 ಮಂದಿ ಸಾವು, 9...

BREAKING : ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ : ಕನಿಷ್ಠ 82 ಮಂದಿ ಸಾವು, 9 ಮಂದಿ ನಾಪತ್ತೆ

ಚೀನಾದ ಉತ್ತರ ಭಾಗದಲ್ಲಿರುವ ಕಲ್ಲಿದ್ದಲು ಗಣಿಯೊಂದರಲ್ಲಿ ಸಂಭವಿಸಿದ ಭೀಕರ ಗ್ಯಾಸ್ ಸ್ಫೋಟದಲ್ಲಿ ಕನಿಷ್ಠ 82 ಮಂದಿ ಮೃತಪಟ್ಟಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಗಣಿ ಅಪಘಾತಗಳಲ್ಲಿ ಇದು ಒಂದಾಗಿದೆ.

ಚೀನಾದ ಶಾಂಗ್‌ಸಿ ಪ್ರಾಂತ್ಯದಲ್ಲಿರುವ ಟೊಂಗ್‌ಝೌ ಗ್ರೂಪ್‌ನ ‘ಲಿಯುಶೆನ್ಯು’ ಕಲ್ಲಿದ್ದಲು ಗಣಿಯಲ್ಲಿ ಈ ದುರಂತ ಸಂಭವಿಸಿದೆ.ಶುಕ್ರವಾರ ಸಂಜೆ 19:29 ಗಂಟೆಗೆ (ಸ್ಥಳೀಯ ಸಮಯ) ಈ ಸ್ಫೋಟ ಸಂಭವಿಸಿದೆ.ಸ್ಫೋಟದ ಸಮಯದಲ್ಲಿ ಗಣಿಯಲ್ಲಿ 247 ಕಾರ್ಮಿಕರು ಕರ್ತವ್ಯದಲ್ಲಿದ್ದರು.ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ಪತ್ತೆಗಾಗಿ ಮತ್ತು ರಕ್ಷಣೆಗಾಗಿ ತಂಡಗಳು ಶ್ರಮಿಸುತ್ತಿವೆ.

ಸ್ಫೋಟದ ನಂತರ, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬದುಕುಳಿದವರನ್ನು ರಕ್ಷಿಸಲು ಮತ್ತು ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುವಂತೆ ಕರೆ ನೀಡಿದ್ದಾರೆ. ಗಣಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಯಾವುದೇ ರೀತಿಯ ಹಿಂಜರಿಕೆ ತೋರಬಾರದು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತಕ್ಕೆ ಕಾರಣವನ್ನು ತನಿಖೆ ಮಾಡುವಂತೆ ಮತ್ತು ಇದಕ್ಕೆ ಹೊಣೆಗಾರರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕ್ಸಿ ಜಿನ್ಪಿಂಗ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಗಾಯಗೊಂಡ ಕಾರ್ಮಿಕರ ಸಂಖ್ಯೆ ಅಥವಾ ಗ್ಯಾಸ್ ಸ್ಫೋಟಕ್ಕೆ ನಿಖರ ಕಾರಣದ ಬಗ್ಗೆ ಅಧಿಕಾರಿಗಳು ಇನ್ನೂ ಹೆಚ್ಚಿನ ವಿವರಗಳನ್ನು ನೀಡಿಲ್ಲ. ಶಾಂಗ್‌ಸಿ ಪ್ರಾಂತ್ಯದಲ್ಲಿ ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಮತ್ತು ತನಿಖಾ ಪ್ರಕ್ರಿಯೆಗಳು ಮುಂದುವರಿದಿವೆ.

ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ತಕ್ಷಣವೇ ಪೂರ್ಣ ಪ್ರಮಾಣದ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುವಂತೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ, ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ, ಜವಾಬ್ದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಮತ್ತು ಘಟನೆಯ ತನಿಖೆ ಮುಂದುವರಿದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular