HomeLatest NewsBREAKING : 'ರೋಜಗಾರ್ ಮೇಳ' : ಪ್ರಧಾನಿ ಮೋದಿಯಿಂದ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ...

BREAKING : ‘ರೋಜಗಾರ್ ಮೇಳ’ : ಪ್ರಧಾನಿ ಮೋದಿಯಿಂದ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ |WATCH VIDEO

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ 19ನೇ ಆವೃತ್ತಿಯ ‘ರೋಜ್‌ಗಾರ್ ಮೇಳ’ಕ್ಕೆ ಚಾಲನೆ ನೀಡಿದ್ದಾರೆ.  ಈ ಕಾರ್ಯಕ್ರಮದ ಮೂಲಕ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಪ್ರಧಾನಿ ವಿತರಿಸಿದ್ದಾರೆ.

ದೇಶದಾದ್ಯಂತ 47 ಸ್ಥಳಗಳಲ್ಲಿ ಈ 19ನೇ ರೋಜ್‌ಗಾರ್ ಮೇಳ ನಡೆಯುತ್ತಿದ್ದು,  ಉದ್ಯೋಗ ಸೃಷ್ಟಿಗೆ ಪ್ರಧಾನಿ ನೀಡಿರುವ ಆದ್ಯತೆಗೆ ಅನುಗುಣವಾಗಿ ಈ ಮೇಳವನ್ನು ಆಯೋಜಿಸಲಾಗಿದ್ದು, ಇದರ ಮೂಲಕ ಇದುವರೆಗೆ ಸುಮಾರು 12 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಲಾಗಿದೆ.ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳು ರೈಲ್ವೆ ಸಚಿವಾಲಯ, ಗೃಹ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು..?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಇಂದು ಪ್ರತಿಯೊಬ್ಬ ಭಾರತೀಯನು ಒಂದು ದೊಡ್ಡ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದಾನೆ, ಅದು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವುದು. ಈ ಗುರಿಯನ್ನು ಸಾಧಿಸಲು ದೇಶವು ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುತ್ತಿದೆ ಮತ್ತು ಈ ಹೂಡಿಕೆಯು ದೇಶದ ಯುವಕರಿಗೆ ಲಕ್ಷಾಂತರ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ಇಂದು ಭಾರತದಲ್ಲಿ ಸೆಮಿಕಂಡಕ್ಟರ್ ಉತ್ಪಾದನೆಗಾಗಿ ಸಂಪೂರ್ಣ ಪೂರೈಕೆ ಸರಪಳಿಯನ್ನು (supply chain) ಸೃಷ್ಟಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಭಾರತದ 10 ಪ್ರಮುಖ ಸೆಮಿಕಂಡಕ್ಟರ್ ಘಟಕಗಳು ಜಗತ್ತಿನಲ್ಲಿ ತಮ್ಮ ಛಾಪು ಮೂಡಿಸಲಿವೆ…”

“ಇಂದು ಭಾರತವು ಹಡಗು ನಿರ್ಮಾಣದಿಂದ ಹಿಡಿದು ಹಡಗುಗಳ ದುರಸ್ತಿ ಮತ್ತು ಮೇಲ್ದರ್ಜೆಗೇರಿಸುವವರೆಗಿನ ಸಂಪೂರ್ಣ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಇದಕ್ಕಾಗಿ ಸುಮಾರು 75,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಮಾಡಲಾಗುತ್ತಿದೆ. ಅದೇ ರೀತಿ, ನಾವು ಭಾರತದಲ್ಲೇ ಸಂಪೂರ್ಣ MRO ಪರಿಸರ ವ್ಯವಸ್ಥೆಯನ್ನು, ಅಂದರೆ ನಿರ್ವಹಣೆ, ಮೇಲ್ದರ್ಜೆಗೇರಿಸುವಿಕೆ ಮತ್ತು ದುರಸ್ತಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಇದು ದೇಶದ ವಿಮಾನಯಾನ ಕ್ಷೇತ್ರಕ್ಕೆ ಭಾರಿ ಸಹಾಯ ಮಾಡಲಿದೆ ಮತ್ತು ಖಂಡಿತವಾಗಿಯೂ ಭಾರತದ ಯುವಕರಿಗೆ ಉದ್ಯೋಗದ ಹೊಸ ಕ್ಷೇತ್ರವನ್ನು ತೆರೆಯಲಿದೆ.”ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular