ಕೋಲಾರ : ಮಹಿಳೆಯ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಲಾಗಿದ್ದು, ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೋಲಾರ ತಾಲೂಕಿನ ಛತ್ರಕೋಡಿ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಜಿನಿ (28) ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೇಗ್ಲಿಗಣಜೇನಹಳ್ಳಿಯ ಶ್ರೀಕಾಂತ್ ಎಂಬಾತ, ರಜಿನಿಯವರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು.ಈ ಕಿರುಕುಳದಿಂದ ಯುವತಿ ಹಲವು ದಿನಗಳಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು.
ಬೆದರಿಕೆ ಒಡ್ಡಿ ಆರೋಪಿಯು ಯುವತಿಯಿಂದ ಲಕ್ಷಾಂತರ ರೂಪಾಯಿ ಹಣ ಮತ್ತು ಮಾಂಗಲ್ಯ ಸರ ಸೇರಿದಂತೆ ಮೌಲ್ಯಯುತವಾದ ಒಡವೆಗಳನ್ನು ವಸೂಲಿ ಮಾಡಿದ್ದನು.ಈ ಅಮಾನವೀಯ ಬ್ಲ್ಯಾಕ್‌ಮೇಲ್‌ನಿಂದ ಮನನೊಂದ ರಜಿನಿ ಕೊನೆಗೆ ನೇಣಿಗೆ ಶರಣಾಗಿದ್ದಾರೆ.
ಈ ಹಿಂದೆ ಕೂಡ ಶ್ರೀಕಾಂತ್ ಇತರ ಇಬ್ಬರು ಮಹಿಳೆಯರಿಗೆ ವಂಚನೆ ಮಾಡಿರುವ ಆರೋಪಗಳು ಕೇಳಿಬಂದಿವೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬಸ್ಥರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

