HomeKarnatakaBIG NEWS: ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮಹತ್ವದ ಹೇಳಿಕೆ

BIG NEWS: ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮಹತ್ವದ ಹೇಳಿಕೆ

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಡಿಜಿಟಲ್ ವೇದಿಕೆಗಳಲ್ಲಿ ಕಾಕ್ರೋಚ್ ಪಕ್ಷಕ್ಕೆ ನಿರ್ಬಂಧ ಹೇರಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮಹತ್ವದ ಪೋಸ್ಟ್ ಮಾಡಿದ್ದಾರೆ.

ಕಾಕ್ರೋಚ್ ಜನತಾ ಪಾರ್ಟಿಗೆ ಎಲ್ಲಾ ಸಾಮಾಜಿಕ ವೇದಿಕೆಗಳಲ್ಲಿ ನಿರ್ಬಂಧ ವಿಧಿಸಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹೆಸರಲ್ಲಿ ಪ್ರಕಟವಾಗುವ ಯಾವುದೇ ಪೋಸ್ಟ್ ಗಳನ್ನು ಅಧಿಕ್ರ‍ಿತ ಎಂದು ಪರಿಗಣಿಸಬೇಡಿ ಎಂದು ಮನವಿ ಮಾಡಿದ್ದಾರೆ.

ನಮ್ಮ ಪಕ್ಷಕ್ಕೆ ಡಿಜಿಟಲ್ ವೇದಿಕೆಗಳಲ್ಲಿ ಪ್ರವೇಶ್ ನಿರ್ಬಂಧಿಸಲಾಗಿದೆ. ದಯವಿಟ್ಟು ಗಮನಿಸಿ, ಪ್ರಸ್ತುತ ನಮಗೆ ಎಲ್ಲಾ ವೇದಿಕೆಗಳಲ್ಲಿಯೂ ಪ್ರವೇಶ ನಿರ್ಬಂಧಿಸಲಾಗಿದೆ. ಇನ್ಮುಂದೆ ಪ್ರಕಟವಾಗುವ ಯಾವುದೇ ಪೋಸ್ಟ್ ಕಾಕ್ರೋಚ್ ಜನತಾ ಪಕ್ಷದ ಅಧಿಕೃತ ಹೇಳಿಕೆ ಎಂದು ಪರಿಗಣಿಸಬೇಡಿ ಎಂದು ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಕ್ರೋಚ್ ಜನತಾ ಪಕ್ಷದ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ ಸ್ಟಾ ಗ್ರಾಮ್ ನಲ್ಲಿ ಪೇಜ್ ಹ್ಯಾಕ್ ಆಗಿದೆ. ನನ್ನ ವೈಯಕ್ತಿಕ ಇನ್ ಸ್ಟಾಗ್ರಾಂ ಪುಟವೂ ಹ್ಯಾಕ್ ಆಗಿದೆ. ಟ್ವಿಟರ್ ಖಾತೆಯನ್ನು ನಿರ್ಬಂಧಿಸಲಾಗಿದೆ. ಹೆಚ್ಚುವರಿಯಾಗಿ ಇಟ್ಟುಕೊಂಡಿದ್ದ ಖಾತೆಯನ್ನೂ ಸ್ಥಗಿತಗೊಳಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಇನ್ನೊಂದು ಪೋಸ್ಟ್ ಮಾಡಿರುವ ಅಭಿಜಿತ್ ದೀಪ್ಕೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಶಿಕ್ಷಣ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಸರ್ಕಾರದ ವೈಫಲ್ಯದಿಂದಾಗಿ ವಿದ್ಯಾರ್ಥಿಯೊಬ್ಬನ ಜೀವ ಹೋಗಿದೆ. ನವ ಭಾರತದ ಹೊಣೆಗಾರಿಕೆ ಬಗ್ಗೆ ಆಗ್ರಹಿಸಿದ್ದಕ್ಕಾಗಿ ಕಾಕ್ರೋಚ್ ಜನತಾ ಪಾರ್ಟಿಯ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಕ್ರೋಚ್ ಜನತಾ ಪಾರ್ಟಿ ಇನ್ ಸ್ಟಾಗ್ರಾಂ ನಲ್ಲಿ ಪೇಜ್ ತೆರೆದ ಕೇವಲ 5 ದಿನಗಳಲ್ಲಿ 1.5 ಕೋಟಿಗೂ ಅಧಿಕ ಫಾಲೋವರ್ಸ್ ಪಡೆದುಕೊಂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular