HomeKarnatakaಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆ ಕೊಂದ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್

ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆ ಕೊಂದ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಹತ್ಯೆಗೈಯ್ಯಲಾಗಿತ್ತು. ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಯಡಮೊಗೆ ಗ್ರಾಮದ ಸಾಲಿಮಕ್ಕಿಯ ಮಂಜುನಾಥ ಶೆಟ್ಟಿ, ಕಾವ್ರಾಡಿ ಗ್ರಾಮದ ಕಂಡೂರಿನ ನದೀಮ್ ಕರಾಣಿ, ಯಡಮೊಗೆ ಗ್ರಾಮದ ಹನೆಬಚ್ಚಲು ನಿವಾಸಿಗಳಾದ ನಾಗರಾಜ ಭೋವಿ ಹಾಗೂ ವೆಂಕಟರಮಣ ಭೋವಿ ಬಂಧಿತ ಆರೋಪಿಗಳು.

ಬಂಧಿತರಿಂದ ಚಿರತೆಯ 4 ಕಾಲಿನ ಉಗುರು ಹಾಗೂ ಮೂಳೆಯ ಬಿಡಿ ಭಾಗಗಳು, ಬಂದೂಕು, 5 ಜೀವಂತ ಗುಂಡುಗಳು, ಎರಡು ಬೈಕ್‌ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿದ್ದಾಪುರ-ಶಿವಮೊಗ್ಗ ಜಿಲ್ಲಾ ರಸ್ತೆ ಸಮೀಪ ಫೆ.4ರಂದು ಚಿರತೆಯೊಂದನ್ನು ಕೊಂದಿರುವ ಬಗ್ಗೆ ಶಂಕರನಾರಾಯಣ ವಲಯದಲ್ಲಿ ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಕರಣಕ್ಕೆ ಸಂಬಂಧಿಸಿ ಶಂಕರನಾರಾಯಣ ವಲಯ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿ ತನಿಖೆ ನಡೆಸಿ ಮೇ 21 ರಂದು ಆರೋಪಿ ಮಂಜುನಾಥ ಶೆಟ್ಟಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಆತ ನೀಡಿದ ಮಾಹಿತಿಯಂತೆ ಉಳಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಬಂಧಿತ ಆರೋಪಿಗಳನ್ನು ಕುಂದಾಪುರ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular