HomeKarnatakaಬಾಕ್ಸಿಂಗ್ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ತರಬೇತುದಾರನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬಾಕ್ಸಿಂಗ್ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ತರಬೇತುದಾರನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

​ಬೆಂಗಳೂರು: ಬಾಕ್ಸಿಂಗ್​ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕ್ರೀಡಾಂಗಣದ ಆವರಣದಲ್ಲಿರುವ ಬಾಕ್ಸಿಂಗ್ ಕ್ಲಬ್ ನಲ್ಲಿ ನಡೆದಿದೆ.

ಬಾಕ್ಸಿಂಗ್ ತರಬೇತುದಾರನೇ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಬಾಕ್ಸಿಂಗ್ ತರಬೇತುದಾರನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಸ್ತೂರಬಾ ರಸ್ತೆಯಲ್ಲಿನ ಕ್ರೀಡಾಂಗಣದ ಆವರಣದೊಳಗಿರುವ ಖಾಸಗಿ ಬಾಕ್ಸಿಂಗ್ ಕ್ಲಬ್‌ನಲ್ಲಿ ತರಬೇತಿ ಪಡೆಯುತ್ತಿದ್ದ 17 ವರ್ಷದ ಅಪ್ರಾಪ್ತೆಗೆ ಕಳೆದ 4 ತಿಂಗಳುಗಳಿಂದ ನಿರಂತರ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. 50 ವರ್ಷ ವಯಸ್ಸಿನ ಬಾಕ್ಸಿಂಗ್ ತರಬೇತುದಾರನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.

ನೊಂದ ಬಾಲಕಿಯ ತಾಯಿ ನೀಡಿರುವ ದೂರಿನ ಅನ್ವಯ ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಸಂಪಂಗಿರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.​

ಬಾಕ್ಸಿಂಗ್ ಸ್ಪರ್ಧೆಗಾಗಿ ಚೆನ್ನೈನಲ್ಲಿದ್ದ ಬಾಲಕಿಯನ್ನು, ಮೇ 17ರಂದು ತನ್ನ ಕೋಣೆಗೆ ಕರೆಸಿಕೊಂಡಿದ್ದ ಆರೋಪಿ, ಆಕೆಯ ಪ್ರತಿರೋಧದ ನಡುವೆಯೂ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಮೊದಲು ಬೆಂಗಳೂರಿನ ಕ್ರೀಡಾಂಗಣದಲ್ಲಿಯೂ ಇದೇ ರೀತಿ ಅನುಚಿತ ವರ್ತನೆಯ ಘಟನೆಗಳು ನಡೆದಿವೆ. ಆದರೆ, ಆ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದರಿಂದ ಸಂತ್ರಸ್ತೆಯು ತನ್ನ ಕುಟುಂಬದವರಿಂದ ವಿಷಯ ಮುಚ್ಚಿಟ್ಟಿದ್ದಳು. ತರಬೇತುದಾರನ ಅನುಚಿತ ವರ್ತನೆಯು ಅತಿಯಾದಾಗ ವಿಷಯ ತಿಳಿದಿದೆ ಎಂದು ಬಾಲಕಿಯ ತಾಯಿ ದೂರಿನಲ್ಲಿ ವಿವರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular