ಬೆಂಗಳೂರು: ರಾಜ್ಯದಲ್ಲಿ ನೀಟ್ ಯುಜಿ ಮರು ಪರೀಕ್ಷೆ ನಡೆಯುವ ದಿನದಂದು ಅಭ್ಯರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಕುರಿತಾಗಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಜೂನ್ 21ರಂದು ನಡೆಯುವ ನೀಟ್ ಯುಜಿ ಮರು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಹೇಳಿದ್ದಾರೆ.
ನೀಟ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ, ತೊಂದರೆ ಆಗದಂತೆ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಸಿಇಟಿ ಸಂದರ್ಭದಲ್ಲೂ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು ಎಂದು ಹೇಳಿದ್ದಾರೆ.

