HomeKarnatakaBREAKING: ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಓರ್ವ ಪೊಲೀಸ್ ಅಧಿಕಾರಿ ಸೇರಿ...

BREAKING: ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಓರ್ವ ಪೊಲೀಸ್ ಅಧಿಕಾರಿ ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್

ಬೆಂಗಳೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಅವರು ಸಂಚರಿಸುವ ಮಾರ್ಗದಲ್ಲಿ ಸ್ಫೋಟಕಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪೊಲಿಸ್ ಅಧಿಕಾರಿ ಸೇರಿ 6 ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲೀವಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂದು ಅವರು ತೆರಳುವ ಮಾರ್ಗದಲ್ಲಿ ಕಗ್ಗಲಿಪುರ ಬಳಿಯ ವಡೇರಹಳ್ಳಿ ಗೇಟ್ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು. ಈ ಘಟನೆ ಭಾರಿ ಸಂಚಲನ ಸೃಷ್ಟಿಸಿತ್ತು.

ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಭಾರಿ ಭದ್ರತೆ ಏರ್ಪಡಿಸಿದ್ದರೂ ಮಾರ್ಗದಲ್ಲಿ ಜಿಲೆಟಿನ್ ನಂತಹ ಸ್ಫೋಟಕಗಳು ಪತ್ತೆಯಾಗಿರುವ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲಿಸ್ ಇಲಾಖೆ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚನೆ ಮಾಡಿತ್ತು. ಎನ್ ಐಎ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಕರ್ತವ್ಯಲೋಪ ಆರೋಪದಲ್ಲಿ ಓರ್ವ ಪೊಲೀಸ್ ಅಧಿಕಾರಿ ಆರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ಆದೇಶ ಹೊರಡಿಸಿದ್ದಾರೆ.

ಓರ್ವ ಪಿಎಸ್ ಐ, ಓರ್ವ ಎ ಎಸ್ ಐ ಹಾಗೂ ನಾಲ್ವರು ಪೇದೆಗಳು ಅಮಾನತುಗೊಂಡವರು. ಈ ಎಲ್ಲಾ ಪೊಲೀಸ್ ಸಿಬ್ಬಂದಿಗಳನ್ನು ಅಂದು ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆಗೆ ನಿಯೋಜಿಸಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular