ಬೆಂಗಳೂರು: ಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದ 65 ಸರ್ಕಾರಿ ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜುಗಳಲ್ಲಿ ಮೇ 25 ರಿಂದ 30ರ ವರೆಗೆ ಸಿಇಟಿ ಸೀಟು ಹಂಚಿಕೆ ಮಂಥನ ಕಾರ್ಯಾಗಾರ ಆಯೋಜಿಸಲಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೇ 28ರಂದು ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಪ್ರತಿದಿನ ಎರಡು ಅವಧಿಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಧ್ಯಾಹ್ನ 2ರಿಂದ ಸಂಜೆ 4 ಗಂಟೆಯವರೆಗೆ ಕಾರ್ಯಾಗಾರ ನಡೆಯಲಿದೆ. ನುರಿತ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ತರಬೇತಿ ಪಡೆದ ಸಂಪನ್ಮೂಲ ವ್ಯಕ್ತಿಗಳು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಿದ್ದಾರೆ.
ಸಿಇಟಿ ಸೀಟು ಹಂಚಿಕೆ ಮಂಥನ ಕಾರ್ಯಾಗಾರದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರಾಧಿಕಾರದ ವೆಬ್ಸೈಟ್ ನಲ್ಲಿರುವ ಲಿಂಕ್ ಬಳಸಿಕೊಂಡು ಸಮಯ ಹಾಗೂ ಕಾರ್ಯಕ್ರಮ ನಡೆಯುವ ಕಾಲೇಜನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಸೀಟು ಹಂಚಿಕೆ ಮಂಥನದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಸ್ಲಾಟ್ ಬುಕ್ ಮಾಡಿಕೊಂಡು ಭಾಗಿಯಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

