ಕಾರವಾರ: ಕಪ್ಪೆ ಚಿಪ್ಪು ಆಯ್ದುಕೊಳ್ಳಲು ಹೋಗಿದ್ದಾಗ ದುರಂತ ಸಂಭವಿಸಿ ಒಂದೇ ಕುಟುಂಬದ ಮೂವರು ಜಲಸಮಾಧಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆ ಹಕ್ಕಲು ನದಿಯಲ್ಲಿ ನಡೆದಿದೆ.
ಮೃತರು ಭಟ್ಕಳದ ಶಿರಾಲಿ ಮೂಲದವರು. ಕಪ್ಪೆ ಚಿಪ್ಪು ತೆಗೆಯಲು ತಟ್ಟೆ ಹಕ್ಕಲು ನದಿಗೆ ಒಟ್ಟು 14 ಜನರು ಹೋಗಿದ್ದರು. ಈ ವೇಳೆ ನದಿ ನೀರಿನಲ್ಲಿ ಇಬ್ಬರು ಮುಳುಗಿದ್ದಾರೆ. ಅವರನ್ನು ರಕ್ಷಿಸಲೆಂದು ಮತ್ತೊಬ್ಬರು ಹೋಗಿದ್ದಾರೆ. ಮೂವರು ನೀರಿನಲ್ಲಿ ಮುಳುಗಿರುವುದನ್ನು ಕಂಡು ಅವರನ್ನು ರಕ್ಷಿಸಲೆಂದು ಒಬ್ಬರ ಹಿಂದೆ ಒಬ್ಬರು ಹೋಗಿದ್ದಾರೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.
ಮೂವರು ನದಿಯಲ್ಲಿ ನಾಪತ್ತೆಯಾಗಿದ್ದಾರೆ. 8 ಜನರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರಾಗಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನ ಅಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ನಾಪತ್ತೆಯಾಗಿರುವವರಿಗಾಗಿ ನದಿಯಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.

